
ಕಾರ್ಕಳ,ಜ.27: ಕಾರ್ಕಳ ತಾಲೂಕಿನ ಪಳ್ಳಿ ರಾಮದ ಕೊಲ್ಲಜಾಲು ಎಂಬಲ್ಲಿನ ನಾರಾಯಣ ನಾಯ್ಕ್ ಎಂಬವರ ಜಾಗದಲ್ಲಿ ಆರೋಪಿ ಶರಣಪ್ಪ ಎಂಬಾತ ಗಣಿ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೇ ಅಕ್ರಮವಾಗಿ ಕೆಂಪು ಕಲ್ಲು ತೆಗೆಯುವ ಖಚಿತ ಮಾಹಿತಿ ಮೇರೆಗೆ ಕಾರ್ಕಳ ನಗರ ಠಾಣೆಯ ಪೊಲೀಸರು ದಾಳಿ ನಡೆಸಿ, ಕಲ್ಲು ತೆಗೆಯಲು ಬಳಸುತ್ತಿದ್ದ ಕಟ್ಟಿಂಗ್ ಯಂತ್ರ ಹಾಗೂ ಡ್ರೆಸಿಂಗ್ ಯಂತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಎಗ್ಗಿಲ್ಲದೇ ನಡೆಯುತ್ತಿದ್ದು, ಅಧಿಕಾರಿಗಳು ಯಾವುದೇ ಕಠಿಣ ಕ್ರಮಕೈಗೊಳ್ಳದ ಹಿನ್ನಲೆಯಲ್ಲಿ ಸರ್ಕಾರದ ಬೊಕ್ಕಸಕ್ಕೆ ರಾಜಧನ ನಷ್ಟವಾಗುತ್ತಿದೆ. ಸಾರ್ವಜನಿಕರ ದೂರಿನ ಮೇರೆಗೆ ಹಲವೆಡೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ಗಣಿಗಾರಿಕೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿದರೂ ಮತ್ತೆ ಗಣಿಗಾರಿಕೆ ನಡೆಸಲಾಗುತ್ತಿದ್ದು ಇದರ ವಿರುದ್ಧ ಗ್ರಾಮಸ್ಥರು ತೀವೃ ಆಕ್ರೋಶ ವ್ಯಕ್ತಡಿಸಿದ್ದಾರೆ.

.
.
.
.
