
ಕಾರ್ಕಳ, ಜ.28: ಮೂರ್ಛೆರೋಗದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕಾರ್ಕಳ ತಾಲೂಕು ಕೌಡೂರು ಗ್ರಾಮದ ಮಾಯಾಡಿ ಎಂಬಲ್ಲಿ ಮಂಗಳವಾರ ನಡೆದಿದೆ.
ಉಡುಪಿ ಕುದಿಗ್ರಾಮದ ಸೀನ(41) ಎಂಬವರು ತೆಂಗಿನಕಾಯಿ ಕೊಯ್ಯುವ ಕೆಲಸ ಮಾಡಿಕೊಂಡಿದ್ದು, ಕಳೆದ 5-6 ವರ್ಷಗಳಿಂದ ಮೂರ್ಛೆರೋಗದಿಂದ ಬಳಲುತ್ತಿದ್ದರು. ಮಂಗಳವಾರ ಮಾಯಾಡಿಗೆ ಕೆಲಸಕ್ಕೆ ಹೋದ ವೇಳೆ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಬೇಲೂರಿನ ಕ್ಲಿನಿಕ್ ಗೆ ಕರೆದೊಯ್ದರೂ ಆ ವೇಳೆಗಾಗಲೇ ಮೃತಪಟ್ಟಿದ್ದರು.
ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

.
.
.
.
