
ಹೆಬ್ರಿ,ಫೆ.01:ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿ ಎಂಬಲ್ಲಿ ನಡೆದಿದೆ.
ಮುದ್ರಾಡಿ ನಿವಾಸಿ ಮುಕುಂದ ನಾಯ್ಕ ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಅವರು ಕಳೆದ 20 ವರ್ಷಗಳಿಂದ ವಿಪರೀತ ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು, ಹೆಬ್ರಿ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚಿನ ಮೂರು ತಿಂಗಳ ಹಿಂದೆ ವಿಪರೀತ ಸಕ್ಕರೆ ಖಾಯಿಲೆಯಿಂದ ಅವರ ಎಡ ಕಾಲಿನ ಬೆರಳನ್ನು ಕತ್ತರಿಸಿ ತೆಗೆಯಲಾಗಿತ್ತು. ಇದರಿಂದ ಮಾನಸಿಕವಾಗಿ ನೊಂದುಕೊಂಡು ಜೀವನದಲ್ಲಿ ಜಿಗುಪ್ಸೆಗೊಂಡು ಶನಿವಾರ ರಾತ್ರಿ ದಿನಾಂಕ: 31/01/2026 ರಂದು ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

.
.
.
.
