Share this news

ಬೆಂಗಳೂರು,ಫೆ.03:ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದೆ.

ರಾಜ್ಯದ ಒಟ್ಟು 3862 ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಆರಂಭಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡಾವಳಿಯನ್ನು ಹೊರಡಿಸಿದ್ದು,ಒಟ್ಟು 1631 ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಘಟಕ ವೆಚ್ಚ ತಲಾ 2.4 ಲಕ್ಷ ರೂಪಾಯಿಯಂತೆ ಒಟ್ಟು 39.14 ಕೋ.ರೂ ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ.
ಇದಲ್ಲದೇ 95 ಕಸ್ತೂರ್ಬಾ ಗಾಂಧಿ ಬಾಲಿಕಾ ವಿದ್ಯಾಲಯಗಳಲ್ಲಿ ತಲಾ 1.20 ಲ.ರೂ ಘಟಕ ವೆಚ್ಚದಂಥೆ ಒಟ್ಟು ವೆಚ್ಚ ರೂ.1.14 ಕೋ.ರೂ ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ.
ಇದರೊಂದಿಗೆ 1326 ಹಿರಿಯ ಪ್ರಾಥಮಿಕ ಶಾಲೆಗಳು ಹಾಗೂ 651 ಪ್ರೌಢ/ಉನ್ನತ ಪ್ರೌಢ ಶಾಲೆಗಳು ಸೇರಿದಂತೆ ಒಟ್ಟು 1977 ಶಾಲೆಗಳಲ್ಲಿ ತಲಾ 2.40 ಲ.ರೂ ಘಟಕ ವೆಚ್ಚದಂತೆ ಒಟ್ಟು 47.44 ಕೋ.ರೂ ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ.

  

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *