
.
.
.
.

ಕಾರ್ಕಳ, ಫೆ.7: ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ನಕ್ರೆ ಹಾಂಕ್ರಾಡಿ ಎಂಬಲ್ಲಿ ಸ್ಫೋಟಕ ಬಳಸಿ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕುಕ್ಕುಂದೂರು ನಿವಾಸಿಗಳಾದ ಟಿ ರವಿಚಂದ್ರ(55ವ) ಹಾಗೂ ಆತನ ಮಗ ಪವನ್ ಕುಮಾರ್(31ವ) ಬಂಧಿತ ಆರೋಪಿಗಳು.
ಆರೋಪಿಗಳು ಜ. 21 ರಂದು ಹಾಂಕ್ರಾಡಿ ಎಂಬಲ್ಲಿ ಯಾವುದೇ ಪರವಾನಗಿ ಇಲ್ಲದೇ ಸ್ಫೋಟಕ ಬಳಸಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸಿದ್ದು, ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡ ನಗರ ಠಾಣಾ ಪಿಎಸ್ಐ ಮುರಳೀಧರ ನಾಯ್ಕ್ ಮತ್ತವರ ತಂಡ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

.
.
.
.