
ಮಂಗಳೂರು, ಫೆ10: ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ಅಪಹರಣ ಯತ್ನ ಕೇಸ್ಗೆ ಟ್ವಿಸ್ಟ್ ಸಿಕ್ಕಿದ್ದು, ನಗರದಲ್ಲಿ ಕಾಲೇಜಿಗೆ ಸೇರುವ ಆಸೆ ಹಿನ್ನೆಲೆ ಆಕೆಯೇ ಕಿಡ್ನ್ಯಾಪ್ ಕಥೆ ಕಟ್ಟಿರುವುದು ಪೊಲೀಸ್ ತನಿಖೆಯಿಂದ ಬಯಲಾಗಿದೆ.
ಸ್ಕೂಟಿಯಲ್ಲಿ ಕಾಲೇಜಿಗೆ ಹೋಗುತ್ತಿದ್ದ ವೇಳೆ ತನ್ನನ್ನು ಅಪಹರಿಸಲು ದುಷ್ಕರ್ಮಿಗಳು ಯತ್ನಿಸಿದ್ದಾರೆ ಎಂದು 16 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆರೋಪಿಸಿದ್ದಳು. ಕಾರಿನಲ್ಲಿ ಬಂದ ಮೂವರು ಮಾಸ್ಕ್ಧಾರಿಗಳು ಚೂರಿ ತೋರಿಸಿ ಬಲವಂತವಾಗಿ ಎಳೆದು ಕಾರಲ್ಲಿ ಕೂರಿಸಲು ಯತ್ನಿಸಿದ್ದಾರೆ . ಈ ವೇಳೆ ತನ್ನ ಕೈಗೆ ಗಾಯವಾಗಿದೆ ಎಂದು ಕಥೆ ಕಟ್ಟಿದ್ದಳು. ಈ ವಿಚಾರ ಕುಟುಂಬಸ್ಥರ ಜೊತೆಗೆ ಸ್ಥಳೀಯರಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿತ್ತು. ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದರು. ಆದರೆ ಪೊಲೀಸರ ತನಿಖೆ ವೇಳೆ ವಿದ್ಯಾರ್ಥಿನಿಯ ನಾಟಕ ಬಯಲಾಗಿದೆ. ಕಿಡ್ನ್ಯಾಪ್ ನಾಟಕ ಮಾಡಿದರೆ ತನ್ನನ್ನು ಮನೆಯವರು ಮಂಗಳೂರಿನ ಕಾಲೇಜಿಗೆ ಸೇರಿಸುತ್ತಾರೆ ಎಂದುಕೊಂಡಿದ್ದ ಯುವತಿ ಅದಕ್ಕೆ ತಕ್ಕಂತೆ ಪ್ಲ್ಯಾನ್ ಮಾಡಿದ್ದಳು. ಬ್ಲೇಡ್ನಲ್ಲಿ ತಾನೇ ಕೈ ಕೊಯ್ದುಕೊಂಡು ಕತೆ ಹೇಳಿದ್ದಳು. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಿಡ್ನಾಪ್ ಯತ್ನ ಪ್ರಕರಣ ಸಂಬಂಧ ಪೊಲೀಸರು ಇಡೀ ದಿನ ಕಾರ್ಯಾಚರಣೆ ನಡೆಸಿದ್ದುರು. ಆದರೆ ತನಿಖೆ ವೇಳೆ ವಿದ್ಯಾರ್ಥಿನಿಯೇ ಪೊಲೀಸರ ಬಳಿ ಸತ್ಯ ಬಾಯ್ಬಿಟ್ಟಿದ್ದಾಳೆ.

.
.
.
.
.
.
.
.
.
.
