
ಅಜೆಕಾರು,ಫೆ.11: ಶ್ರೀ ಮಹಾದೇವಿ ಭಜನಾ ಮಂಡಳಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಘ ಮರ್ಣೆ ಅಜೆಕಾರು ಇದರ 25ನೇ ವರ್ಷದ ರಜತ ಸಂಭ್ರಮ ಏಕಾಹ ಭಜನಾ ಮಂಗಲೋತ್ಸವವು ನಾಳೆ ಜರುಗಲಿದೆ.
ಬೆಳಿಗ್ಗೆ 6 .56ಕ್ಕೆ ಏಕಾಹ ಭಜನಾ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು ಮರುದಿನ ಸೂರ್ಯೋದಯದವರಿಗೆ ನಿರಂತರ ಭಜನೆ ನಡೆಯಲಿದೆ. ಸಂಜೆ 7 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಶಾಸಕ ವಿ ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ, ನ್ಯಾಯವಾದಿಗಳಾದ ವಿದ್ಯಾ ಮಲ್ಯ ಎಡಪದವು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.
ಈ ಎಲ್ಲಾ ಕಾರ್ಯಕ್ರಮಗಳಿಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ಮಂಡಳಿಯ ಪ್ರಕಟಣೆ ತಿಳಿಸಿದೆ.

.
.
.
.
.
.
.
.
.
.
