
ಬೆಂಗಳೂರು,ಫೆ.12: ಸೈಟ್ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ರೌಡಿಶೀಟರ್ ವಿ.ಜಿ.ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಇಂದು ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜ್ನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಿಂದ ಭೈರತಿ ಬಸವರಾಜ್ ತಲೆಮರೆಸಿಕೊಂಡಿದ್ದರು. ಇಂದು ಸುಪ್ರೀಂಕೋರ್ಟ್‌ನಲ್ಲಿ ಭೈರತಿ ಬಸವರಾಜ್ ನಿರೀಕ್ಷಣಾ ಅರ್ಜಿ ವಜಾ ಆಗುತ್ತಿದ್ದಂತೆ ಬೇರೆ ದಾರಿಯೇ ಇಲ್ಲದೆ ಸಿಐಡಿ ಮುಂದೆ ಶರಣಾಗಲು ನಿರ್ಧರಿಸಿದ್ದರು. ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಹಮದಾಬಾದ್ನಿಂದ ಬಂದು ಇಳಿದು ಹೊರ ಬರುತ್ತಿದ್ದಂತೆ ದೇವನಹಳ್ಳಿ ಎಸಿಪಿ ಹರ್ಷ ಬಂಧಿಸಿದ್ದಾರೆ.

.
.
.
.
.
.
.
.
.
.
