Share this news

ಬೆಂಗಳೂರು, ಫೆ. 13: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಹಾಗೂ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ರೋಡ್ ಟ್ರಾನ್ಸ್‌ಪೋರ್ಟ್ ಸಂಸ್ಥೆಗಳ ಸೂಚನೆ ನೀಡಿದ ಹಿನ್ನೆಲೆ ರಾಜ್ಯ ಸಾರಿಗೆ ಇಲಾಖೆ ಸ್ಲೀಪರ್ ಕೋಚ್ ಮತ್ತು ಅಖಿಲ ಭಾರತ ಪ್ರವಾಸಿ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಫೆಬ್ರವರಿ 28ರೊಳಗೆ ಜಾರಿಗೆ ತರುವಂತೆ ಖಾಸಗಿ ಬಸ್ ಮಾಲೀಕರಿಗೆ ಖಡಕ್ ನಿರ್ದೇಶನ ನೀಡಿದೆ.

ಚಿತ್ರದುರ್ಗ ಖಾಸಗಿ ಬಸ್ ಅಗ್ನಿದುರಂತದ ಬಳಿಕ ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿಸುವ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಜ.21ರಂದು ಖಾಸಗಿ ಬಸ್ ಮಾಲೀಕರು, ಕೋಚ್ ನಿರ್ಮಾಣ ಕಂಪನಿಗಳ ಪ್ರತಿನಿಧಿಗಳು ಹಾಗೂ ಸಾರಿಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಬಸ್ ಬಾಡಿ ನಿರ್ಮಾಣ ವಿಧಾನ, ತುರ್ತು ನಿರ್ಗಮನ ದ್ವಾರಗಳ ಸಂಖ್ಯೆ, ಅಗ್ನಿಶಾಮಕ ಸಾಧನಗಳ ಅಳವಡಿಕೆ, ಎಮರ್ಜೆನ್ಸಿ ಎಕ್ಸಿಟ್ ಬಳಿ ಸೂಕ್ತ ಆಸನ ವ್ಯವಸ್ಥೆ ಸೇರಿದಂತೆ 11 ನಿಯಮಗಳನ್ನು ಕಡ್ಡಾಯಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ಎಸಿಬಸ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಲ್ಲಿ ನಂದಿಸುವ ವಿಧಾನಗಳ ಬಗ್ಗೆ ಸೂಚನೆ ನೀಡಬೇಕು, ಗ್ಲಾಸ್ ಒಡೆದು ಹೊರಬರಲು ಹ್ಯಾಮರ್‌ಗಳನ್ನು ಇರಿಸಬೇಕು, ಪ್ರಯಾಣಿಕರಿಗೆ ಎಚ್ಚರಿಕೆ ಅಲಾರಂ ವ್ಯವಸ್ಥೆ ಮಾಡಬೇಕು ಹಾಗೂ ಡೋರ್ ಜಂಪ್ ಮಾಡಲು ಮೆಟ್ಟಿಲುಗಳ ಸೌಲಭ್ಯ ಒದಗಿಸಬೇಕು ಎಂದು ಸಚಿವರು ಖಾಸಗಿ ಬಸ್ ಮಾಲೀಕರಿಗೆ ಮತ್ತು ಬಸ್ ಬಾಡಿ ಬಿಲ್ಡಿಂಗ್ ಮಾಡುವ ಕಂಪನಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *