
ಕಾರ್ಕಳ,ಫೆ20: ನಾಳೆ (ಫೆ.21) 33ಕೆವಿ ಸ್ಟೇಷನ್ ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ, 220/110/11 ಕೆವಿ ಕೇಮಾರ್ ವಿದ್ಯುತ್ ಕೇಂದ್ರದಿಂದ ಹೊರಡುವ 11ಕೆವಿ ಬಜಗೋಳಿ, ಹೊಸ್ಮಾರು ಫೀಡರ್ ಗಳಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಘಂಟೆಯವರೆಗೆ ವಿದ್ಯುತ್ ನಿಲುಗಡೆಗೊಳಿಸಲಾಗುವುದು.
ಆದ್ದರಿಂದ ಕಾರ್ಕಳ ತಾಲೂಕಿನ ಬಜಗೋಳಿ, ಮುಡ್ರಾಲು, ಕಡಾರಿ, ಮುಳ್ಳೂರು, ಮಾಳ, ಗುರ್ಗಲ್ ಗುಡ್ಡೆ, ಚೌಕಿ, ಹುಕ್ರಟ್ಟೆ, ನೆಲ್ಲಿಕಾರು, ಹೊಸ್ಮಾರು, ಈದು, ನಲ್ಲೂರು, ಜೋಡುಕಟ್ಟೆ, ಕುಂಟಿಬೈಲು, ರೆಂಜಾಳ, ಬೊರ್ಕಟ್ಟೆ, ಕಾಜರಬೈಲು, ಅಡ್ಕರಪಲ್ಕೆ, ನೆಲ್ಲಿಗುಡ್ಡೆ, ಮಂಜಡ್ಕ, ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

.
.
.
.
.
.
.
.
.
.
