
ಬೆಂಗಳೂರು, ಫೆ.21: ಲಷ್ಕರ್ ಎ ತೊಯ್ಬಾ (LeT) ಉಗ್ರ ಜುನೈದ್ ಅಹ್ಮದ್ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ ಘೋಷಿಸಿದೆ. ಜುನೈದ್ ಅಹ್ಮದ್ ಘೋಷಿತ ಅಪರಾಧಿಯಾಗಿದ್ದು, ಶಸ್ತ್ರಾಸ್ತ್ರ, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡ ಪ್ರಕರಣದಲ್ಲಿ ಎನ್ಐಎಗೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಉಗ್ರ.
ಜುನೈದ್ ಅಹ್ಮದ್ ಎಂಬ ಉಗ್ರ ಜುನೈದ್, ಜೆಡಿ ಜಮ್ಶೀದಾ, ಜಾನ್, ಸುಹಾನಾ, ಡಿಜೆ ರಿಟ್ಜ್, ಜಮೀಲಾ ಮತ್ತು ಜನ್ನು ಲ
ಹೆಸರುಗಳಿಂದ ಗುರುತಿಸಿಕೊಂಡಿದ್ದು, ಬೆಂಗಳೂರಿನ ನಾಗಶೆಟ್ಟಿಹಳ್ಳಿಯ ಮಲ್ಲಿಗೆ ಲೇಔಟ್ನಲ್ಲಿ ವಾಸಿಸುತ್ತಿದ್ದ ಎನ್ನಲಾಗಿದೆ.
ಜುನೈದ್ ಅಹ್ಮದ್ ಬಂಧನಕ್ಕೆ ನೆರವಾಗುವಂಥ ಯಾವುದೇ ಮಾಹಿತಿಯನ್ನು ನೀಡುವವರಿಗೆ ಬಹುಮಾನ ನೀಡಲಾಗುವುದು. ಮಾಹಿತಿದಾರರ ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ಎನ್ಐಎ ಹೇಳಿದೆ. ಮಾಹಿತಿಯನ್ನು 080-29510900 ಅಥವಾ 8904241100 ಗೆ ಕರೆ ಮಾಡಿ ಹಂಚಿಕೊಳ್ಳಬಹುದು.

.
.
.
.
.
.
.
.
.
.
