
ಕಾರ್ಕಳ, ಫೆ.24: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಮತ್ತು ಪಾದಾಚಾರಿ ಇಬ್ಬರೂ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಫೆ.22 ರಂದು ರಾತ್ರಿ ಉಡುಪಿಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಬೈಕ್ ಜಾರ್ಕಳ ಪೇಟೆಯಲ್ಲಿ ರಸ್ತೆ ದಾಟಲೆಂದು ನಿಂತಿದ್ದ ವಿಠಲ್ ಅವರಿಗೆ ಡಿಕ್ಕಿಯಾಗಿದೆ.
ಅಪಘಾತದ ತೀವೃತೆಗೆ ಬೈಕ್ ಸವಾರ ಹಾಗೂ ಪಾದಾಚಾರಿ ವಿಠಲ್ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಬೈಕ್ ಸವಾರ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದು, ವಿಠಲ್ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


.
.
.
.
.
.
.
.
.
.
