Share this news

ಕಾರ್ಕಳಫೆ.25: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತಹAತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಬುಧವಾರ ಕಾರ್ಕಾಳದಲ್ಲಿ ಸುದ್ಧಿಗಾರರ ಜೊತೆ ಮಾತನಾಡಿ, ನಮ್ಮ ಸರ್ಕಾರ ಉದ್ಯೋಗ ಒದಗಿಸುವ ಭರವಸೆಯನ್ನು ನೀಡುತ್ತದೆ. ಒಳಮೀಸಲಾತಿಯ ಕಾರಣದಿಂದ ನೇಮಕಾತಿ ಪ್ರಕ್ರಿಯೆ ವಿಳಂಬವಾಯಿತು. ಪ್ರಸ್ತುತ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದರು.
ಚಿಕ್ಕಮಗಳೂರಿನಲ್ಲಿ ಅನೆ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಅನೆ, ಚಿರತೆ ಮತ್ತು ಹುಲಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ, ಮಾನವ ವನ್ಯಪ್ರಾಣಿ ಸಂಘರ್ಷಕ್ಕೆ ಕಾರಣವಾಗುತ್ತಿದೆ. ಆದ್ದರಿಂದ ವನ್ಯಜೀವಿಗಳು ಜನವಸತಿ ಪ್ರದೇಶಗಳಿಗೆ ಬರದಂತೆ ಕಾಡಂಚಿನ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬ್ಯಾರಿಕೇಡ್ ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ ಎಂದರು.
ಶಿವಮೊಗ್ಗ ವಿದ್ಯಾರ್ಥಿ ಸಂಕೇತ್ ಹತ್ಯೆ ಹಾಗೂ ಅಪ್ರಾಪ್ತರಲ್ಲಿ ಗಾಂಜಾ ಸೇವೆನೆ ವ್ಯಾಪಕವಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ಸಂಪೂರ್ಣವಾಗಿ ನಿಗ್ರಹಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದರು. ಅಜೀಂಪ್ರೇAಜಿ ವಿವಿಯ ಮೇಲೆ ಎಬಿವಿಪಿ ವಿದ್ಯಾರ್ಥಿಗಳು ದಾಂಧಲೆ ನಡೆಸಿರುವ ಬಗ್ಗೆ ಉತ್ತರಿಸಿ, ಯಾವುದೇ ಸಂಘಟನೆಗಳು ಕಾನೂನು ವಿರುದ್ಧವಾಗಿ ನಡೆದುಕೊಂಡಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಆಗುAಬೆ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುಮತಿ ನೀಡಲಾಗುವುದೇ ಎಂಬುದಕ್ಕೆ ಉತ್ತರಿಸುತ್ತಾ, ಇದಕ್ಕೆ ಸಂಬAಧಿಸಿದAತೆ ಪರಿಸರವಾದಿಗಳೊಂದಿಗೆ ಚರ್ಚಿಸಲಾಗುವುದು ಹಾಗೂ ಅನುಮತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಕಾರ್ಕಾಳದಲ್ಲಿ ಪರುಶರಾಮ ಧೀಂ ಪಾರ್ಕ್ ನಿರ್ಮಾಣದ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಧೀಂ ಪಾರ್ಕ್ ನಿರ್ಮಾಣ ಯೋಜನೆಯನ್ನು ಸಧ್ಯದಲ್ಲಿಯೇ ಪೂರ್ಣಗೊಳಿಸಲಾಗುವುದು ಎಂದರು. ಶಾಸಕರು ಸಚಿವರಾಗಲು ಬಯಸುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಶಾಸಕರು ಸಚಿವರಾಗಬಯಸುವುದು ತಪ್ಪಲ್ಲ. ಮೊದಲ ಬಾರಿ ಶಾಸಕರಾದವರಿಗೆ ಮಂತ್ರಿ ಪದವಿ ನೀಡಬಾರದೆಂಬ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದರು.

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *