Share this news

ಮಂಗಳೂರು, ಫೆ.27: ಉದ್ಯೋಗಾವಕಾಶದ ಆಮಿಷವೊಡ್ಡಿ ನೂರಾರು ವಿದ್ಯಾರ್ಥಿಗಳನ್ನು ವಂಚಿಸಿರುವ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಮಹಾರಾಷ್ಟ್ರ ಮೂಲದ ‘ವೆಕ್ಸಾನ್’ ಎಂಬ ಕಂಪನಿ, BMP ಪ್ರೈವೇಟ್ ಲಿಮಿಟೆಡ್ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೆಬ್ ಡಿಸೈನರ್ ಹಾಗೂ ವೆಬ್ ಡೆವಲಪರ್ ಹುದ್ದೆಗಳಿಗಾಗಿ ಜಾಹೀರಾತು ನೀಡುತ್ತಿದ್ದು, ಕಂಪನಿಯ ಮೋಸದ ಜಾಲಕ್ಕೆ ಬಿದ್ದ ವಿದ್ಯಾರ್ಥಿಗಳು ಸಾವಿರಾರು ರೂ. ಕಳೆದುಕೊಂಡಿದ್ದು ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಣವಿಲ್ಲದಿದ್ದರೆ ಮನೆಯಿಂದ ಸುಳ್ಳು ಹೇಳಿ ತರಲು, ಚಿನ್ನ ಅಡವಿಡಲು ಸಹ ಸಲಹೆ ನೀಡಲಾಗುತ್ತಿತ್ತು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಹೂಡಿಕೆ ಮಾಡಿದ ಹಣಕ್ಕೆ ಮೊಬೈಲ್ ಚಾರ್ಜರ್, ಇಯರ್‌ಫೋನ್, ಸೀರೆ, ಕಾಸ್ಮೆಟಿಕ್ ವಸ್ತುಗಳನ್ನು ನೀಡಿ, ಮತ್ತಷ್ಟು ಜನರನ್ನು ಸೇರಿಸಿದರೆ ಕಮಿಷನ್ ಸಿಗುತ್ತದೆ ಎಂದು ಆಮಿಷ ಒಡ್ಡಲಾಗುತ್ತಿತ್ತಂತೆ. ಅದಲ್ಲದಂತೆ ಒಬ್ಬ ವಿದ್ಯಾರ್ಥಿ ಇನ್ನೋ ಮೂವರನ್ನು ಕರೆತಂದರೆ 11 ಸಾವಿರ ಕಮಿಷನ್ ನೀಡುವುದಾಗಿಯೂ ನಂಬಿಸಲಾಗಿತ್ತು ಎಂದು ವಿದ್ಯಾರ್ಥಿಗಳು ದೂರಿದ್ದಾರೆ.ಹಣ ನೀಡಿದ ಬಳಿಕ ಉದ್ಯೋಗವೂ ಸಿಗದೆ, ಹೂಡಿಕೆ ಮಾಡಿದ ಮೊತ್ತವೂ ವಾಪಸು ಸಿಗದೆ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಈ ನಡುವೆ, ಮಂಗಳೂರಿನ ಸ್ವಸ್ತಿಕ್ ಸ್ಕೂಲ್ ಆಫ್ ಬ್ಯುಸಿನೆಸ್ ಮ್ಯಾನೇಜ್ಮೆಂಟ್ನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಯತ್ನಕ್ಕೂ ಮುಂದಾಗಿದ್ದು, ನಂತರ ಕಂಪನಿ ಹಣವನ್ನು ಹಿಂತಿರುಗಿಸಿದರೆಂದು ತಿಳಿದುಬಂದಿದೆ.

ವಂಚನೆಗೆ ಒಳಗಾದ ವಿದ್ಯಾರ್ಥಿಗಳು ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

Leave a Reply

Your email address will not be published. Required fields are marked *