
ದಕ್ಷಿಣ ಕನ್ನಡ, ಫೆ.28: ಮಾರ್ಚ್ 3 ರಂದು ಸಂಭವಿಸಲಿರುವ ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಭಕ್ತಾದಿಗಳ ದೇವರ ದರ್ಶನ ಸಮಯವನ್ನು ತಾತ್ಕಾಲಿಕವಾಗಿ ಬದಲಾಯಿಸಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿಯು ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಭಕ್ತರಿಗೆ ಅಗತ್ಯ ಸೂಚನೆಗಳನ್ನು ನೀಡಿದೆ.
ಅಂದು ಮಧ್ಯಾಹ್ನ 1:30ರವರೆಗೆ ಮಾತ್ರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿರುತ್ತದೆ. ರಕ್ತ ಚಂದ್ರಗ್ರಹಣದ ಅವಧಿ ಮುಗಿದ ನಂತರ, ಅಂದರೆ ರಾತ್ರಿ 7:30ರಿಂದ ಪುನಃ ದೇವರ ದರ್ಶನವನ್ನು ಪ್ರಾರಂಭಿಸಲಾಗುವುದು. ಬಹುತೇಕ ದೇವಸ್ಥಾನಗಳಲ್ಲಿ ಗ್ರಹಣದ ಸಂದರ್ಭದಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂಬ ನಿಯಮಕ್ಕೆ ಅನುಗುಣವಾಗಿ, ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿಯೂ ಭಕ್ತಾದಿಗಳ ಅನುಕೂಲ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಭಕ್ತಾದಿಗಳು ಈ ಬದಲಾದ ದರ್ಶನ ಸಮಯಗಳನ್ನು ಗಮನದಲ್ಲಿಟ್ಟುಕೊಂಡು ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನಕ್ಕೆ ಆಗಮಿಸುವಂತೆ ಧರ್ಮಸ್ಥಳ ದೇವಸ್ಥಾನ ಆಡಳಿತ ಮಂಡಳಿ ವಿನಂತಿಸಿದೆ.


.
.
.
.
.
.
.
.
.
.
