
ಕಾರ್ಕಳ,ಫೆ.28: ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದ ಪಡು ಕಲ್ಲಾಪು ಪರಿಸರದಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ಸುತ್ತಮುತ್ತಲಿನ ಪ್ರದೇಶಗಳಿಗೆ ವ್ಯಾಪಿಸಿದ್ದು, ಕಾರ್ಕಳ ಅಗ್ನಿಶಾಮಕ ದಳದ ಸಕಾಲಿಕ ಕಾರ್ಯಾಚರಣೆಯಿಂದ ಬೆಂಕಿ ನಂದಿಸಿದ ಪರಿಣಾಮ ಭಾರೀ ಅನಾಹುತ ತಪ್ಪಿದೆ.
ಪಡು ಕಲ್ಲಾಪು ನಿವಾಸಿ ರಾಮ ನಾಯ್ಕ್ ಎಂಬವರ ಜಾಗದಲ್ಲಿ ಶನಿವಾರ ಮಧ್ಯಾಹ್ನ ಕಾಣಿಸಿಕೊಂಡ ಬೆಂಕಿ ಸುತ್ತಮುತ್ತಲಿನ ಪ್ರದೇಶಗಳಿಗೆ ವ್ಯಾಪಿಸಿದೆ.
ವಿದ್ಯುತ್ ಲೈನ್ ಗೆ ಮರದ ಗೆಲ್ಲು ತಗುಲಿ ಬೆಂಕಿ ಹೊತ್ತಿಕೊಂಡು ಒಣ ಹುಲ್ಲಿಗೆ ತಗುಲಿ ಬೆಂಕಿ ವ್ಯಾಪಿಸಿರುವ ಶಂಕೆ ವ್ಯಕ್ತವಾಗಿದೆ.
ತಕ್ಷಣವೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಸುಮಾರು ಒಂದು ಗಂಟೆ ಮಿಕ್ಕಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ಕಾರ್ಕಳ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಚಂದ್ರಶೇಖರ ದೇವಾಡಿಗ ನೇತೃತ್ವದ ಅಗ್ನಿಶಾಮಕ ತಂಡದಲ್ಲಿ ಸಿಬ್ಬಂದಿ ಗಳಾದ ಹರಿಪ್ರಸಾದ್ ನಾಗಪ್ಪ, ನಿತ್ಯಾನಂದ,ಭೀಮಪ್ಪ
ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.


.
.
.
.
.
.
.
.
.
.
