
ಹೆಬ್ರಿ, ಮಾ.02: ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಆಗುಂಬೆ ಘಾಟಿಯ 2 ನೇ ತಿರುವಿನಲ್ಲಿ ಬೈಕಿಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹುಣಸೂರಿನ ಶೃಜನ್ ತಮ್ಮೆಗೌಡ ಅವರು ಭಾನುವಾರ ತನ್ನ ಸ್ನೆಹಿತನ ಬೈಕಿನಲ್ಲಿ ಅಶ್ವಿನಿ ಅವರೊಂದಿಗೆ ಸೋಮೇಶ್ವರದಿಂದ ಹಾಸನಕ್ಕೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಟಿಪ್ಪರ್ ಚಾಲಕನ ಅತಿವೇಗ ಹಾಗೂ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


.
.
.
.
.
.
.
.
.
.
