Share this news

ಕಾರ್ಕಳ, ಮಾ.04: ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿದ್ದ ಕಾರ್ಕಳದ ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಅವರ ಸತತ ಪ್ರಯತ್ನದ ಫಲವಾಗಿ ಬುಧವಾರ ಬೆಳಿಗ್ಗೆಯಿಂದ ವಿದ್ಯುತ್ ಸಂಪರ್ಕ ಮರುಸ್ಥಾಪನೆಯಾಗಿದ್ದು, ನೀರು ಹರಿಸುವ ಪ್ರಕ್ರಿಯೆ ಯಶಸ್ವಿಯಾಗಿ ಪುನಾರಂಭಗೊಂಡಿದೆ.ಇದರಿಂದ ರೈತರ ಯಾವುದೇ ಸಮಸ್ಯೆ ಇಲ್ಲವೆಂದು ಉದಯ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ.

​ಯೋಜನೆಯ ವಿದ್ಯುತ್ ಸಂಪರ್ಕ ಕಡಿತಗೊಂಡು ರೈತರು ಆತಂಕಕ್ಕೀಡಾಗಿದ್ದನ್ನು ಗಮನಿಸಿ ಉಪಮುಖ್ಯಮಂತ್ರಿ ಹಾಗೂ ಬೃಹತ್ ನೀರಾವರಿ ಸಚಿವರಾದ ​ ಡಿ.ಕೆ. ಶಿವಕುಮಾರ್, ​ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್,ವಿಧಾನ ಪರಿಷತ್ ಸದಸ್ಯರು ಹಾಗೂ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಹಾಗೂ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಉದಯ ಶೆಟ್ಟಿ ಮನವಿ ಮಾಡಿದ ಮೇರೆಗೆ ಗಂಭೀರತೆಯನ್ನು ಅರಿತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಕ್ಷಣ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರು ಈ ಬಗ್ಗೆ ವಿಶೇಷ ಆಸಕ್ತಿ ವಹಿಸಿ, ಇಲಾಖೆಯ ತಾಂತ್ರಿಕ ಅಡೆತಡೆಗಳನ್ನು ನಿವಾರಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದರು. ನಾಯಕರ ಈ ಸಮನ್ವಯದ ಫಲವಾಗಿ ಇಂದು ಬೆಳಿಗ್ಗೆಯಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ​

ಇಂದು ಬೆಳಿಗ್ಗೆಯಿಂದ ಆಣೆಕಟ್ಟು ಮೋಟಾರ್‌ಗಳು ಕಾರ್ಯಾರಂಭ ಮಾಡಿದ್ದು, ನದಿಯಿಂದ ನೀರನ್ನು ಎತ್ತಿ ಕೆರೆಗಳಿಗೆ ಹರಿಸಲಾಗುತ್ತಿದೆ. ಬೇಸಿಗೆಯ ಆರಂಭದಲ್ಲಿ ಕೃಷಿ ಭೂಮಿಗೆ ನೀರು ಲಭ್ಯವಾಗಿರುವುದು ಈ ಭಾಗದ ರೈತರಲ್ಲಿ ಸಂತಸ ತಂದಿದೆ. ​”ಎಣ್ಣೆಹೊಳೆ ಯೋಜನೆ ಸ್ಥಗಿತಗೊಂಡ ಮಾಹಿತಿ ಬಂದ ತಕ್ಷಣ ನಾವು ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಿದೆವು. ವಿಶೇಷವಾಗಿ ಉಪಮುಖ್ಯಮಂತ್ರಿಗಳು ಹಾಗೂ ಮೆಸ್ಕಾಂ ಅಧ್ಯಕ್ಷರಾದ ಹರೀಶ್ ಕುಮಾರ್ ಅವರು ಈ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಪರಿಹಾರ ಒದಗಿಸಿದ್ದಾರೆ. ರೈತರ ಹಿತ ಕಾಪಾಡುವುದು ನಮ್ಮ ಮೊದಲ ಆದ್ಯತೆ.ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕರು ಸಮಸ್ಯೆ ಪರಿಹರಿಸುವುದನ್ನು ಬಿಟ್ಟು ಪ್ರತಿಭಟನೆ ನಡೆಸುವುದು ಅವರ ಕೆಲಸದ ಮೇಲಿನ ಇಚ್ಚಾಶಕ್ತಿಯ ಕೊರತೆಯತ್ತ ಬೊಟ್ಟು ಮಾಡುತ್ತಿದೆ. ರಾಜಕೀಯ ಮಾಡುವುದಾದರೆ ಅವರ ಶಾಸಕ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ಕೇವಲ ರಾಜಕೀಯ ಮಾಡಲಿ ಎಂದು ಉದಯ ಕುಮಾರ್ ಶೆಟ್ಟಿ ಹೇಳಿದ್ದಾರೆ.

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

Leave a Reply

Your email address will not be published. Required fields are marked *