
ಹೆಬ್ರಿ,ಮಾ. 4: ತಾಲೂಕಿನ ಮುದ್ರಾಡಿ ಗ್ರಾಮದಲ್ಲಿ ತಡರಾತ್ರಿ ಚಿರತೆ ಪ್ರತ್ಯಕ್ಷವಾಗಿದ್ದು ಸಾರ್ವಜನಿಕರು ಆತಂಕಕ್ಕೀಡಾಗಿದ್ದಾರೆ.ಮುದ್ರಾಡಿ ಬೀಡು ಚಂದ್ರಮೋಹನ್ ಜೈನ್ ಅವರಿಗೆ ಸೇರಿದ್ದ ಜಾಗದಲ್ಲಿ ಮಾ.03 ರಂದು ತಡರಾತ್ರಿ ಸುಮಾರು 1.30 ಗಂಟೆಗೆ ಚಿರತೆ ಕಾಣಿಸಿಕೊಂಡಿದೆ.
ಮುದ್ರಾಡಿ ಗ್ರಾಮದ ಬಲ್ಲಾಡಿ ದೇವಸ್ಥಾನದಲ್ಲಿ ವಾರ್ಷಿಕ ನೇಮೊತ್ಸವಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ವ್ಯಕ್ತಿಯೊಬ್ಬರಿಗೆ ಚಿರತೆ ಕಾಣಿಸಿಕೊಂಡಿದ್ದು, ಸಾರ್ವಜನಿಕರು ಒಡಾಡುವಾಗ ಎಚ್ಚರಿಕೆಯಿಂದಿರುವಂತೆ ತಿಳಿಸಿದ್ದಾರೆ.


.
.
.
.
.
.
.
.
.
.
