
ಕಾರ್ಕಳ, ಮಾ6: 33ಕೆವಿ ಸ್ಟೇಷನ್ ಗೆ ಸಂಬಂಧಿಸಿದ 11ಕೆವಿ ಫೀಡರ್ ಗಳ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ನಾಳೆ(ಮಾ.7) 220/110/11 ಕೆವಿ ಕೇಮಾರ್ ವಿದ್ಯುತ್ ಕೇಂದ್ರದಿಂದ ಹೊರಡುವ 11ಕೆವಿ ಬಜಗೋಳಿ, ಹೊಸ್ಮಾರು, ಮಿಯ್ಯಾರು, ಫೀಡರ್ ಗಳಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಗೊಳಿಸಲಾಗುವುದು.
ಆದ್ದರಿಂದ ಕಾರ್ಕಳ ತಾಲೂಕಿನ ಬಜಗೋಳಿ, ಮುಡ್ರಾಲು, ಕಡಾರಿ, ಮುಳ್ಳೂರು, ಮಾಳ, ಗುರ್ಗಲ್ ಗುಡ್ಡೆ, ಚೌಕಿ, ಹುಕ್ರಟ್ಟೆ, ನೆಲ್ಲಿಕಾರು, ಹೊಸ್ಮಾರು, ಈದು, ನಲ್ಲೂರು, ಜೋಡುಕಟ್ಟೆ, ಕುಂಟಿಬೈಲು, ರೆಂಜಾಳ, ಬೊರ್ಕಟ್ಟೆ, ಕಾಜರಬೈಲು, ಅಡ್ಕರಪಲ್ಕೆ, ನೆಲ್ಲಿಗುಡ್ಡೆ, ಮಂಜಿಡ್ಕ, ಮಿಯ್ಯಾರು ಇಂಡಸ್ಟ್ರಿಯಲ್ ಏರಿಯಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಗ್ರಾಹಕರು ಇದನ್ನು ಗಮನಿಸಿ ಮೆಸ್ಕಾಂನೊಂದಿಗೆ ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.


.
.
.
.
.
.
.
.
.
.
