
ಕಾರ್ಕಳ, ಮಾ.7: ಬಡ ನಿವೇಶನರಹಿತರಿಗೆ ಹಕ್ಕುಪತ್ರ ವಿತರಣೆಯು ನಿರಂತರ ಪ್ರಕ್ರಿಯೆಯಾಗಿದ್ದು,ಯಾವುದೇ ಕಾರಣಕ್ಕೂ ಅಧಿಕಾರಿಗಳು ಅರ್ಜಿಗಳನ್ನು ತಿರಸ್ಕರಿಸದೇ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬ ಅರ್ಹರಿಗೂ ನಿವೇಶನ ನೀಡುವಲ್ಲಿ ಮುತುವರ್ಜಿಯಿಂದ ಕೆಲಸ ಮಾಡಬೇಕು ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು.
ಅವರು ಶನಿವಾರ ಕಾರ್ಕಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ 94ಸಿ ಹಾಗೂ ಸಿಸಿಯಲ್ಲಿ 25 ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರ ಹಾಗೂ ನಮೂನೆ 53ಮತ್ತು 57ರಲ್ಲಿ 7 ಫಲಾನುಭವಿಗಳಿಗೆ ಬಗರ್ ಹುಕುಂ ಹಕ್ಕುಪತ್ರ, ಕೈಗಾರಿಕಾ ಇಲಾಖೆಯ ಟೈಲರಿಂಗ್ ಯಂತ್ರಗಳು,ಮರಗೆಲಸ ಕಿಟ್, ಗಾರೆ ಕೆಲಸ ಕಿಟ್ ಸೇರಿದಂತೆ ಒಟ್ಟು 144 ವಿವಿಧ ಸರ್ಕಾರಿ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಾರ್ಕಳ ತಹಶೀಲ್ದಾರ್ ಪ್ರದೀಪ್ ಕುಮಾರ್, ಕೈಗಾರಿಕಾ ಇಲಾಖೆಯ ಉಪನಿರ್ದೇಶಕ ವಾಮನ ನಾಯ್ಕ್ , ಅಕ್ರಮ-ಸಕ್ರಮ ಸಮಿತಿಯ ಸದಸ್ಯರಾದ ನವೀನ್ ದೇವಾಡಿಗ,ಸುನೀತಾ ಶೆಟ್ಟಿ, ರಮೇಶ್ ಬಜಕಳ ಉಪಸ್ಥಿತರಿದ್ದರು. ಕಂದಾಯ ನಿರೀಕ್ಷಕ ರಿಯಾಜ್ ಅಹಮ್ಮದ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.



.
.
.
.
.
.
.
.
.
.
