
ಉಡುಪಿ, ಮಾ.14: ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಉಡುಪಿ ಜಿಲ್ಲಾ ಅಬಕಾರಿ ಉಪ ಆಯುಕ್ತ (DC) ಶ್ರೀನಿವಾಸ್ ಟಿ. ಎಂ. ಅವರಿಗೆ ಸಂಬಂಧಿಸಿದ 15 ವಿವಿಧ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಸರಣಿ ದಾಳಿ ನಡೆಸಿದ್ದು, ಒಟ್ಟು 8 ಕೋಟಿ 69 ಲಕ್ಷ ರೂಪಾಯಿ ಮೌಲ್ಯದ ಆಸ್ತಿಯನ್ನು ಪತ್ತೆ ಮಾಡಿದ್ದಾರೆ.
ಲೋಕಾಯುಕ್ತ ಮಂಗಳೂರು ವಿಭಾಗದ ಎಸ್ಪಿ ದಿನೇಶ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ ಸ್ಥಿರ ಆಸ್ತಿಗಳು ಒಟ್ಟು 6,90,64,716 ರೂ. ಇದರಲ್ಲಿ ವಿವಿಧೆಡೆ 11 ನಿವೇಶನಗಳು ಇವೆ. 6 ಸುಸಜ್ಜಿತ ವಾಸದ ಮನೆಗಳು ಇದೆ. 31 ಎಕರೆ ಕೃಷಿ ಭೂಮಿ ಇದೆ ಎಂದು ಹೇಳಲಾಗಿದೆ. ಚರಾಸ್ತಿಗಳು ಒಟ್ಟು 2,66,90,001 ರೂ. ಇದರಲ್ಲಿ 3,95,941 ಹಣ, 1.47 ಕೋಟಿ ರೂ. ಮೌಲ್ಯದ ಚಿನ್ನದ ಆಭರಣಗಳು, 17 ಲಕ್ಷ ರೂ. ಬೆಲೆಬಾಳುವ ಕಾರುಗಳು, 25.75 ಲಕ್ಷ ರೂ. ನಗದು ಠೇವಣಿ, 72.68 ಲಕ್ಷ ರೂ. ಮೌಲ್ಯದ ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿದೆ.ಅಧಿಕಾರಿ ಶ್ರೀನಿವಾಸ್ ಅವರು ತಮ್ಮ ಆದಾಯದ ಮೂಲಕ್ಕಿಂತಲೂ ಹೆಚ್ಚಿನ ಆಸ್ತಿ ಹೊಂದಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಲೋಕಾಯುಕ್ತ ಪೊಲೀಸರು ಈ ದಾಳಿಯನ್ನು ನಡೆಸಿದ್ದಾರೆ. ಮಂಗಳೂರು, ಉಡುಪಿ ಸೇರಿದಂತೆ ರಾಜ್ಯದ 15 ಕಡೆಗಳಲ್ಲಿ ಏಕಕಾಲಕ್ಕೆ ಎರಡು ದಿನಗಳ ಕಾಲ ಈ ಶೋಧ ಕಾರ್ಯ ನಡೆದಿದೆ.


.
.
.
.
.
.
.
.
.
.
