
ಕಾರ್ಕಳ,ಮಾ.17: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಕಾಲೇಜಿನ ಮೆಕ್ಯಾನಿಕಲ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಮೋಹನ್ ಪೂಜಾರಿ ಅವರು ‘ಅಪ್ಗ್ರೇಡೇಶನ್ ಆಫ್ ಲೀನ್ ಅಯರ್ನ್ ಓರ್ ಯುಸಿಂಗ್ ಮೈಕ್ರೋವೇವ್ ಆಂಡ್ ಅಲ್ಟ್ರಾಸೋನಿಕ್ ಪ್ರೀಟ್ರೀಟ್ಮೆಂಟ್’ ಎಂಬ ವಿಷಯದ ಬಗೆಗೆ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್.ಐ.ಟಿ.ಕೆ) ಸುರತ್ಕಲ್ ಡಾಕ್ಟರೇಟ್ ಪದವಿ ಘೋಷಿಸಿದೆ. ಎನ್.ಐ.ಟಿ.ಕೆ ಮೈನಿಂಗ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ. ಡಾ. ಹರ್ಷ ವರ್ಧನ ಅವರ ಮಾರ್ಗದರ್ಶನದಲ್ಲಿ ಇವರು ಈ ಸಂಶೋಧನೆಯನ್ನು ಪೂರ್ಣಗೊಳಿಸಿದ್ದಾರೆ.














.
.
.
.
.
.
.
.
.
.
