
ನವದೆಹಲಿ, ಮಾ.19: ಚಾಂದ್ರಮಾನ ಯುಗಾದಿ ಮತ್ತು ಹೊಸ ವರ್ಷದ ಈ ಶುಭ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶವಾಸಿಗಳಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ವಸಂತ ಋತುವಿನ ಆಗಮನವು ಹೊಸ ಚೈತನ್ಯ ಹೊತ್ತು ತರಲಿ ಎಂದು ಅವರು ಹಾರೈಸಿದ್ದಾರೆ.
ಕರ್ನಾಟಕದ ಜನತೆಗೆ ಕನ್ನಡದಲ್ಲೇ ಶುಭ ಕೋರಿದ ಪ್ರಧಾನಿ ಮೋದಿ
ಯುಗಾದಿ ಹಬ್ಬದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ ‘X’ (ಟ್ವಿಟರ್) ಮೂಲಕ ಅವರು ಹಂಚಿಕೊಂಡಿರುವ ಸಂದೇಶದಲ್ಲಿ ಕನ್ನಡಿಗರ ಸಂಸ್ಕೃತಿ ಮತ್ತು ಹೊಸ ಆರಂಭದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಕರ್ನಾಟಕದ ನನ್ನ ಎಲ್ಲಾ ಸಹೋದರ ಸಹೋದರಿಯರಿಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು” ಎಂದು ಪ್ರಧಾನಿ ಮೋದಿಯವರು ಕನ್ನಡ ಭಾಷೆಯಲ್ಲೇ ಸಂದೇಶ ನೀಡುವ ಮೂಲಕ ಕನ್ನಡಿಗರ ಮನ ಗೆದ್ದಿದ್ದಾರೆ.
ಯುಗಾದಿಯು ಹೊಸ ಭರವಸೆ ಮತ್ತು ಚೈತನ್ಯದ ಹಬ್ಬವಾಗಿದ್ದು, ಇದು ಪ್ರತಿಯೊಬ್ಬರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರಲಿ ಎಂದು ಅವರು ಹಾರೈಸಿದ್ದಾರೆ.ಮುಂಬರುವ ವರ್ಷವು ಕರ್ನಾಟಕದ ಮನೆಮನಗಳಲ್ಲಿ ಸುಖ, ಶಾಂತಿ, ಆರೋಗ್ಯ ಮತ್ತು ಐಶ್ವರ್ಯವನ್ನು ತುಂಬಲಿ ಎಂದು ಅವರು ಪ್ರಾರ್ಥಿಸಿದ್ದಾರೆ.















.
.
.
.
.
.
.
.
.
.
