
ಬೆಂಗಳೂರು, ಮಾ.19:ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪರಿಣಾಮವಾಗಿ ಉಡುಪಿ ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ನಿನ್ನೆ ಬೆಂಗಳೂರಿನಲ್ಲಿ ಆಲಿಕಲ್ಲು ಮಳೆಯಾಗಿತ್ತು. ಇಂದು ಕೂಡ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ (ಗಂಟೆಗೆ 30-40 ಕಿ.ಮೀ ವೇಗ) ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.ರೈತರು ಮತ್ತು ಸಾರ್ವಜನಿಕರು ಮಳೆಯ ಸಮಯದಲ್ಲಿ ಮರದ ಕೆಳಗೆ ಆಶ್ರಯ ಪಡೆಯಬಾರದು ಎಂದು ಸೂಚಿಸಲಾಗಿದೆ. ಮಳೆ ಬರುವ ಮುನ್ನ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಮಳೆಯ ಮುನ್ಸೂಚನೆ ಇದ್ದರೂ, ಮಧ್ಯಾಹ್ನದ ಸಮಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿಯೇ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.















.
.
.
.
.
.
.
.
.
.
