Share this news

ಬೆಂಗಳೂರು,ಮಾ.23: ಮಹಿಳೆಯರ ಮೇಲೆ ಮೂಡುಬಿದರೆ ಪೊಲೀಸ್ ಇನ್‌ಸ್ಪೆಕ್ಟರ್ ಸಂದೇಶ್ ಅವರು ದೌರ್ಜನ್ಯ ಎಸಗಿರುವ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಮೂಡುಬಿದರೆ ಘಟನೆಗೆ ಸಂಬAಧಿಸಿದAತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿಯವರು ಸಂತ್ರಸ್ತೆಯ ಭೇಟಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬAಧಿಸಿದAತೆ ಅನೇಕ ವಿಚಾರಗಳ ಬಗ್ಗೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವಂತೆ ಡಿಜಿಪಿ ಅವರಿಗೆ ಸೂಚಿಸಿದ್ದೇನೆ ಎಂದರು.

ಮಹಿಳಾ ದೌರ್ಜನ್ಯ ಆರೋಪ ಬಂದ ತಕ್ಷಣವೇ ಆತನನ್ನು ಅಮಾನತು ಮಾಡುವ ಮೂಲಕ ತಕ್ಷಣದ ಕ್ರಮಕೈಗೊಳ್ಳಲಾಗಿದೆ. ಈ ಪ್ರಕರಣಸ ಕುರಿತ ವರದಿ ನೀಡುವಂತೆ ಸೂಚಿಸಲಾಗಿದೆ. ಇನ್ನೂ ಅನೇಕ ವಿಚಾರಗಳನ್ನು ಕೇಳಿದ ಮೇಲೆ ಹೆಚ್ಚಿನ ತನಿಖೆ ಮಾಡಬೇಕೆಂದು ಸಿಐಡಿ ತನಿಖೆಗೆ ವಹಿಸಲಾಗಿದೆ. ತನಿಖೆ ಬಳಿಕ ಸತ್ಯಾಂಶ ಹೊರಬರುತ್ತದೆ. ಇನ್ನು ಎಷ್ಟು ಜನ ಸಂತ್ರಸ್ತರಿದ್ದಾರೆ ಎಂಬುದು ತನಿಖೆ ವೇಳೆ ಗೊತ್ತಾಗಲಿದೆ. ಇದಕ್ಕಾಗಿಯೇ ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಹೇಳಿದರು.

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

Leave a Reply

Your email address will not be published. Required fields are marked *