Share this news

 ಬೆಂಗಳೂರು, ಮಾ. 24: ಕರ್ನಾಟಕದ ವಾಹನ ಸವಾರರಿಗೆ ಮತ್ತೊಂದು ಶಾಕ್ ಎದುರಾಗಿದೆ. ರಾಜ್ಯದಾದ್ಯಂತ ಏ.1ರಿಂದ ಟೋಲ್ ದರಗಳನ್ನು ಶೇ 3 ರಿಂದ 5 ರವರೆಗೆ ಹೆಚ್ಚಿಸುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (National Highways Authority of India) ಮಾಹಿತಿಯ ಪ್ರಕಾರ, ಪ್ರತಿವರ್ಷದಂತೆ ಈ ಬಾರಿ ಕೂಡ ಹೋಲ್​ಸೇಲ್ ಪ್ರೈಸ್ ಇಂಡೆಕ್ಸ್ (WPI) ಆಧಾರಿತವಾಗಿ ಟೋಲ್ ದರ ಪರಿಷ್ಕರಣೆ ಮಾಡಲಾಗುತ್ತಿದೆ. ಶೀಘ್ರದಲ್ಲೇ ಹೊಸ ದರಗಳನ್ನು ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆ.

ಇದರ ಜೊತೆಗೆ ಫಾಸ್ಟ್‌ಟ್ಯಾಗ್ ಬಳಕೆದಾರರಿಗೂ ಕೆಲವು ಬದಲಾವಣೆಗಳು ಜಾರಿಗೆ ಬರುತ್ತಿವೆ. ಫಾಸ್ಟ್‌ಟ್ಯಾಗ್ ಖಾತೆಯಲ್ಲಿ ಹಣ ಕೊರತೆಯಿದ್ದರೆ ಅಥವಾ ತಾಂತ್ರಿಕ ಸಮಸ್ಯೆಯಿಂದ ಪಾವತಿ ವಿಫಲವಾದರೆ, ದ್ವಿಗುಣ ಟೋಲ್ ಶುಲ್ಕ ವಿಧಿಸುವ ನಿಯಮವನ್ನು ಕಟ್ಟುನಿಟ್ಟಾಗಿ ಅನುಸರಿಸಲು ನಿರ್ಧರಿಸಲಾಗಿದೆ. ಇದರಿಂದ ವಾಹನ ಸವಾರರು ತಮ್ಮ ಖಾತೆಯಲ್ಲಿ ಸಮರ್ಪಕ ಹಣ ಇರಿಸುವುದು ಅತ್ಯಗತ್ಯವಾಗಿದೆ.

ಟೋಲ್ ದರವನ್ನು ಹೋಲ್​ಸೇಲ್ ಪ್ರೈಸ್ ಇಂಡೆಕ್ಸ್ (WPI) ಆಧಾರಿತವಾಗಿ ನಿಗದಿ ಮಾಡಲಾಗುತ್ತದೆ. ಉದಾಹರಣೆಗೆ 2.5 ರೂ. ಅಥವಾ ಅದಕ್ಕಿಂತ ಹೆಚ್ಚು ಏರಿಕೆಯಿದ್ದರೆ, ಅದನ್ನು 5 ರೂ.ಗೆ ರೌಂಡ್ ಆಫ್ ಮಾಡಲಾಗುತ್ತದೆ. ಈ ಪರಿಷ್ಕರಣೆ 2008ರ ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮಾವಳಿಗಳ ಪ್ರಕಾರ ನಡೆಯುತ್ತಿದ್ದು, ಪ್ರತೀ ಹಣಕಾಸು ವರ್ಷದ ಆರಂಭದಲ್ಲಿ ದರ ಪರಿಷ್ಕರಣೆ ಸಾಮಾನ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒಟ್ಟಿನಲ್ಲಿ, ಏಪ್ರಿಲ್ 1ರಿಂದ ಜಾರಿಯಾಗಲಿರುವ ಈ ಟೋಲ್ ದರ ಏರಿಕೆ ರಾಜ್ಯದ ವಾಹನ ಸವಾರರು ಮತ್ತು ಸಾರಿಗೆ ವಲಯದ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ.

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

Leave a Reply

Your email address will not be published. Required fields are marked *