
ಕಾರ್ಕಳ,ಮಾ.24: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾರ್ಕಳ ತಾಲೂಕಿನ ಮಾಳ ಘಾಟಿಯಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ.
ಬೈಕ್ ಸವಾರ ಬಜಗೋಳಿ ದಿಡಿಂಬಿರಿ ನಿವಾಸಿ ನವೀನ್ (45) ಎಂದು ತಿಳಿದುಬಂದಿದೆ. ಮೃತ ಬೈಕ್ ಸವಾರ ನವೀನ್ ಅವರು ಬಜಗೋಳಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದು, ಇವರು ಹಾವು ಹಿಡಿಯುವ ಹವ್ಯಾಸ ರೂಢಿಸಿಕೊಂಡಿದ್ದರು. ಮಂಗಳವಾರ ಬೆಳಗ್ಗೆ ಹಾವನ್ನು ಹಿಡಿದು ಕಾಡಿಗೆ ಬಿಡುವ ಸಲುವಾಗಿ ತನ್ನ ಸ್ನೇಹಿತನ ಜೊತೆ ಬೈಕ್ ನಲ್ಲಿ ಹೊರಟಿದ್ದರು. ಇನ್ನೇನು ಮಾಳ ಚೆಕ್ ಪೋಸ್ಟ್ ದಾಟಿ ಕುದುರೆಮುಖ ಅಭಯಾರಣ್ಯದಲ್ಲಿ ಹಾವನ್ನು ಬಿಡಲು ಹೋಗುತ್ತಿದ್ದಾಗ ತಿರುವಿನಲ್ಲಿ ಕಾರ್ಕಳ ಕಡೆಗೆ ಯಮ ವೇಗದಲ್ಲಿ ಬರುತ್ತಿದ್ದ ಟಿಪ್ಪರ್ ನೇರವಾಗಿ ಬೈಕಿಗೆ ಅಪ್ಪಳಿಸಿದೆ. ಅಪಘಾತದ ರಭಸಕ್ಕೆ ನವೀನ್ ಅವರು ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದು,ಸಹಸವಾರ ಗಾಯಗೊಂಡಿದ್ದಾರೆ.
ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಹೆಲ್ಮೆಟ್ ರಹಿತ ಚಾಲನೆಯಿಂದ ಸವಾರ ಬಲಿ
ಮೃತ ನವೀನ್ ಅವರು ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದ ಪರಿಣಾಮವಾಗಿ ರಸ್ತೆಗೆ ಎಸೆಯಲ್ಪಟ್ಟು ಮೃತಪಟ್ಟಿದ್ದಾರೆ. ಒಂದುವೇಳೆ ಹೆಲ್ಮೆಟ್ ಧರಿಸಿದ್ದರೆ ಪ್ರಾಣಾಪಾಯದಿಂದ ಪಾರಾಗುತ್ತಿದ್ದರು.















.
.
.
.
.
.
.
.
.
.
