
ನವದೆಹಲಿ, ಮಾ.14: ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಇತರೇ ಯಾವುದೇ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟ ಜಾತಿ ಅಥವಾ ಪಂಗಡದ ವ್ಯಕ್ತಿಯು ಮೀಸಲಾತಿ ಸೌಲಭ್ಯಗಳನ್ನು ಪಡೆಯಲು ಅರ್ಹನಲ್ಲ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ.
ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯೊಬ್ಬರು ತಮ್ಮ ಹಳೆಯ ಪರಿಶಿಷ್ಟ ಜಾತಿಯ ಪ್ರಮಾಣಪತ್ರದ ಆಧಾರದ ಮೇಲೆ ಸೌಲಭ್ಯಗಳನ್ನು ಪಡೆಯಲು ಪ್ರಯತ್ನಿಸಿದ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ, ಮತಾಂತರದ ನಂತರ ವ್ಯಕ್ತಿಯ ಸಾಮಾಜಿಕ ಮತ್ತು ಧಾರ್ಮಿಕ ಸ್ಥಿತಿಗತಿಗಳು ಬದಲಾಗುವುದರಿಂದ ಅವರು ಈ ಮೀಸಲಾತಿಗೆ ಅರ್ಹರಲ್ಲ ಎಂದು ತೀರ್ಪಿನಲ್ಲಿ ತಿಳಿಸಿದೆ ಹಾಗೂ ಈ ಹಿಂದೆ ಆಂಧ್ರಪ್ರದೇಶ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ನ್ಯಾಯಮೂರ್ತಿಗಳಾದ ಪಿ. ಕೆ. ಮಿಶ್ರಾ ಮತ್ತು ಎನ್. ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು ಈ ತೀರ್ಪನ್ನು ನೀಡಿದೆ. ಸಂವಿಧಾನದ ಅಡಿಯಲ್ಲಿ ಪರಿಶಿಷ್ಟ ಜಾತಿ ಎಂದು ಗುರುತಿಸಲ್ಪಡಲು ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮದ ಭಾಗವಾಗಿರುವುದು ಅವಶ್ಯಕ ಎಂದು ಪೀಠವು ಅಭಿಪ್ರಾಯಪಟ್ಟಿದೆ. SC ಅಥವಾ ST ಸಮುದಾಯದ ವ್ಯಕ್ತಿಯು ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಮುಸ್ಲಿಂ, ಕ್ರೈಸ್ತ ಧರ್ಮ ಅಥವಾ ಇತರ ಯಾವುದೇ ಧರ್ಮಗಳಿಗೆ ಮತಾಂತರಗೊಂಡು ಅದನ್ನು ಅನುಸರಿಸುತ್ತಿದ್ದರೆ, ಅವರು ತಮ್ಮ ಪರಿಶಿಷ್ಟ ಜಾತಿಯ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಈ ಹಿಂದೆ ಆಂಧ್ರಪ್ರದೇಶ ಹೈಕೋರ್ಟ್ ನೀಡಿದ್ದ ತೀರ್ಪಿನಂತೆ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಗಳು ಪರಿಶಿಷ್ಟ ಜಾತಿಯ ಪ್ರಮಾಣಪತ್ರದ ಆಧಾರದ ಮೇಲೆ ಸೌಲಭ್ಯ ಪಡೆಯುವುದನ್ನು ಹೈಕೋರ್ಟ್ ಅಸಿಂಧುಗೊಳಿಸಿತ್ತು. ವ್ಯಕ್ತಿಯೊಬ್ಬರು ತಮ್ಮ ಮೂಲ ಧರ್ಮವನ್ನು ಬಿಟ್ಟು ಬೇರೆ ಧರ್ಮವನ್ನು ಅಧಿಕೃತವಾಗಿ ಸ್ವೀಕರಿಸಿದಾಗ, ಪರಿಶಿಷ್ಟ ಜಾತಿಯ ವರ್ಗಕ್ಕೆ ಸಿಗುವ ಸಾಂವಿಧಾನಿಕ ರಕ್ಷಣೆ ಮತ್ತು ಮೀಸಲಾತಿ ಹಕ್ಕುಗಳು ಅನ್ವಯಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ















.
.
.
.
.
.
.
.
.
.
