
ಬೆಂಗಳೂರು,ಮಾ.26: ಮಹಾವೀರ ಜಯಂತಿ ಪ್ರಯುಕ್ತ ನೀಡಲಾಗಿದ್ದ ಸಾರ್ವತ್ರಿಕ ರಜೆಯನ್ನು ಮಾರ್ಚ್ 31ರ ಬದಲಾಗಿ ಮಾರ್ಚ್ 30ರ ಸೋಮವಾರಕ್ಕೆ ಬದಲಾಯಿಸಿ ರಾಜ್ಯ ಆದೇಶ ಹೊರಡಿಸಿದೆ. ಈ ಹಿನ್ನಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿದೆ. ಈ ಹಿಂದೆ ಪ್ರಕಟಿಸಲಾಗಿದ್ದ ಅಂತಿಮ ವೇಳಾಪಟ್ಟಿಯ ಪ್ರಕಾರ ಮಾರ್ಚ್ 30ರಂದು ತೃತೀಯ ಭಾಷೆ ಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿತ್ತು.
ಆದರೆ ಮಾ 30ರಂದು ಸರ್ಕಾರಿ ರಜೆ ಹಿನ್ನಲೆಯಲ್ಲಿ ಈ ಹಿಂದೆ ನಿಗದಿಯಾಗಿದ್ದ ತೃತೀಯ ಭಾಷೆ ವಿಷಯದ ಪರೀಕ್ಷೆಯನ್ನು ಈಗ ಮಾರ್ಚ್ 31ರ ಮಂಗಳವಾರದAದು ನಡೆಸಲು ಮಂಡಳಿ ತೀರ್ಮಾನಿಸಿದೆ. ಈ ಪರೀಕ್ಷೆಯು ಈಗಾಗಲೇ ನಿಗದಿಪಡಿಸಿರುವ ಅವಧಿಯಲ್ಲೇ ನಡೆಯಲಿದ್ದು, ವೇಳಾಪಟ್ಟಿಯಲ್ಲಿರುವ ಉಳಿದ ವಿಷಯಗಳ ಪರೀಕ್ಷೆಗಳು ಯಾವುದೇ ಬದಲಾವಣೆಯಿಲ್ಲದೇ ಯಥಾವತ್ತಾಗಿ ಮುಂದುವರಿಯಲಿವೆ ಎಂದು ಪರೀಕ್ಷಾ ಮಂಡಳಿ ಸ್ಪಷ್ಟಪಡಿಸಿದೆ. ವಿದ್ಯಾರ್ಥಿಗಳು ಮತ್ತು ಪೋಷಕರು ಈ ಬದಲಾವಣೆಯನ್ನು ಗಮನಿಸಬೇಕೆಂದು ಕೋರಲಾಗಿದೆ.















.
.
.
.
.
.
.
.
.
.
