
ಕಾರ್ಕಳ, ಮಾ.29: ವಿವಾಹಿತ ಯವಕನೋರ್ವ ಕಾರ್ಕಳದ ತನ್ನ ಪತ್ನಿ ಮನೆಯಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದ.ಕ. ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಸುದೀಪ್ ರೈ (31) ಅವರು ಚಿಕಿತ್ಸೆಗೆ ಸ್ಪಂದಿಸದೇ ಭಾನುವಾರದಂದು ಮಂಗಳೂರಿನ ಯೆನಪೋಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಆದರೆ ಮೃತ ಸುದೀಪ್ ಸಾವಿನ ಕುರಿತು ಆತನ ಪೋಷಕರು ಅನುಮಾನ ವ್ಯಕ್ತಪಡಿಸಿದ್ದು, ಆತನಿಗೆ ವಿಷ ಪ್ರಾಶನ ಮಾಡಲಾಗಿದೆ ಎಂದು ಆತನ ಪತ್ನಿಯ ವಿರುದ್ಧ ದೂರಿದ್ದಾರೆ.
ನೆಲ್ಯಾಡಿಯ ಸುದೀಪ್ ಕಾರ್ಕಳದ ಸೌಮ್ಯ ಶೆಟ್ಟಿಯನ್ನು ಪ್ರೀತಿಸಿ ಇತ್ತೀಚೆಗಷ್ಟೇ ಮದುವೆಯಾಗಿದ್ದರು ಎನ್ನಲಾಗಿದೆ. ಸುದೀಪ್ ಅವರು
ಕಾರ್ಕಳ ಬಂಗ್ಲೆಗುಡ್ಡೆ ಕಜೆ ಎಂಬಲ್ಲಿ ಪತ್ನಿ ಮನೆಯಲ್ಲಿ ವಾಸವಿದ್ದರು. ಆದರೆ ಕಳೆದ ಮೂರು ದಿನಗಳ ಹಿಂದೆ ಸುದೀಪ್ ರೈ ವಿಷ ಸೇವನೆಯಿಂದ ಅಸ್ವಸ್ಥಗೊಂಡಿದ್ದು, ಪತ್ನಿ ಸೌಮ್ಯ ಶೆಟ್ಟಿ ಅವರು ಗಂಡ ಸುದೀಪ್ ರೈಯವರನ್ನು ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
ಅನಂತರ ಹೆಚ್ಚಿನ ಚಿಕಿತ್ಸೆಗೆ ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ಕುರಿತು ಸುದೀಪ್ ರೈ ತಾಯಿ ಪುಷ್ಪಲತಾ ಕಾರ್ಕಳ ನಗರ ಠಾಣೆಗೆ ದೂರು ನೀಡಿದ್ದರು.
ಇತ್ತ ಸುದೀಪ್ ರೈ ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಯುವಕನ ಕುಟುಂಬಸ್ಥರು ಮಂಗಳೂರಿನ ಯೆನಪೋಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದರು. ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದ ಸುದೀಪ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮಾ.29ರ ಮುಂಜಾನೆ ಮೃತಪಟ್ಟಿದ್ದಾರೆ. ಮಗ ಸುದೀಪ್ ಸಾವಿನ ಕುರಿತು ತಂದೆ ದಾಮೋದರ ಶೆಟ್ಟಿ ಪತ್ನಿ ಸೌಮ್ಯ ಶೆಟ್ಟಿಯವರ ಮೇಲೆ ಅನುಮಾನ ವ್ಯಕ್ತಪಡಿಸಿದ್ದು , ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸುದೀಪ್ ರೈ ಸಾವಿನ ಕುರಿತು ನಿಖರ ಕಾರಣ ಏನು ಎನ್ನುವ ಕುರಿತು ತನಿಖೆ ಕೈಗೊಂಡಿದ್ದಾರೆ.ಪೊಲೀಸರ ತನಿಖೆಯ ಬಳಿಕವೇ ಸುದೀಪ್ ರೈ ಸಾವಿಗೆ ನಿಖರ ಕಾರಣವೇನು ಎಂದು ತಿಳಿದು ಬರಬೇಕಿದೆ.















.
.
.
.
.
.
.
.
.
.
