Share this news

 

ಬೆಂಗಳೂರು, ಏ.2: ಶೈಕ್ಷಣಿಕ ವಲಯದಲ್ಲಿ ಸಂಚಲನ ಮೂಡಿಸಿರುವ ಎಸ್‌ಎಸ್‌ಎಲ್‌ಸಿ ತೃತೀಯ ಭಾಷಾ ಪರೀಕ್ಷೆಯಲ್ಲಿ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ತೀರ್ಮಾನವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಆದರೆ ಈ ನಿರ್ಧಾರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕರಿ ನೆರಳು ಬೀರಲಿದೆ ಎಂದು ಆರೋಪಿಸಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ದಾಖಲಾಗಿದೆ. ಬೆಂಗಳೂರಿನ ನಿವಾಸಿಗಳಾದ ಎಚ್.ಎನ್. ಚಂದನಾ ಮತ್ತು ಎಸ್. ವೆಂಕಟೇಶ್ ಸಲ್ಲಿಸಿರುವ ಈ ಅರ್ಜಿಯಲ್ಲಿ, ಸರ್ಕಾರದ ನಡೆಯನ್ನು ‘ಅಸಂವಿಧಾನಿಕ’ ಎಂದು ಉಲ್ಲೇಖಿಸಲಾಗಿದೆ.

ಮುಖ್ಯವಾಗಿ, ಯಾವುದೇ ಒಂದು ದೊಡ್ಡ ಶೈಕ್ಷಣಿಕ ಬದಲಾವಣೆ ಮಾಡುವ ಮುನ್ನ ಸಾರ್ವಜನಿಕರ ಅಥವಾ ಶಿಕ್ಷಣ ತಜ್ಞರ ಅಭಿಪ್ರಾಯ ಪಡೆಯುವುದು ಅತ್ಯಗತ್ಯ. ಆದರೆ, ಈ ವಿಷಯದಲ್ಲಿ ಸರ್ಕಾರ ಅಂತಹ ಯಾವುದೇ ಪ್ರಕ್ರಿಯೆ ನಡೆಸದೆ, ಸಚಿವ ಸಂಪುಟದ ಒಪ್ಪಿಗೆಯನ್ನೂ ಪಡೆಯದೆ ಏಕಪಕ್ಷೀಯವಾಗಿ ತೀರ್ಮಾನಿಸಿದೆ ಎಂಬುದು ಅರ್ಜಿದಾರರ ಪ್ರಬಲ ವಾದ.

ಇನ್ನು ಈಗಾಗಲೇ ಈ ವಿಷಯವು ರಾಜಕೀಯ ಬಣ್ಣ ಪಡೆದುಕೊಂಡಿದ್ದು,ರಾಜ್ಯ ಸರ್ಕಾರವು ‘ಹಿಂದಿ ಹೇರಿಕೆ’ ತಡೆಯುವ ನೆಪದಲ್ಲಿ ತ್ರಿಭಾಷಾ ಸೂತ್ರಕ್ಕೆ ಎಳ್ಳುನೀರು ಬಿಟ್ಟು, ಪರೋಕ್ಷವಾಗಿ ದ್ವಿಭಾಷಾ ನೀತಿಯನ್ನು ಜಾರಿಗೊಳಿಸುತ್ತಿದೆ ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ.ಮತ್ತೊಂದೆಡೆ, SSLC 3ನೇ ಭಾಷೆಯ ಅಂಕಗಳನ್ನು ರದ್ದುಗೊಳಿಸಿರುವ ನಿರ್ಧಾರದಿಂದ, ಉರ್ದು ಹಾಗೂ ಸಂಸ್ಕೃತವನ್ನು ಪ್ರಥಮ ಭಾಷೆಯಾಗಿ ಓದುವವರಿಗೆ 3ನೇ ಭಾಷೆಯಾದ ‘ಕನ್ನಡ’ಕ್ಕೆ ಮಹತ್ವ ಇಲ್ಲದಂತಾಗುವುದಿಲ್ಲವೇ ಎಂಬ ಪ್ರಶ್ನೆಯೂ ಉದ್ಭವಿಸಿತ್ತು.

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

Leave a Reply

Your email address will not be published. Required fields are marked *