
ಕಾರ್ಕಳ, ಏ.02 : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಟ್ರಸ್ಟಿನ ಸಮಾಜಮುಖಿ ಕಾರ್ಯಕ್ರಮದ ಒಂದು ಭಾಗವಾಗಿ ಹಲವಾರು ವರ್ಷಗಳಿಂದ ಕಾರ್ಕಳ ತಾಲೂಕಿನ ಬಡ ಅರ್ಹ ಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡಲಾಗುತ್ತಿದ್ದು, ಈ ಬಾರಿಯೂ 2026-27ನೇ ಶೈಕ್ಷಣಿಕ ಸಾಲಿನಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ 6 ರಿಂದ 10ನೇ ತರಗತಿಯವರೆಗೆ ಪ್ರತೀ ತರಗತಿಗೆ 5 ವಿದ್ಯಾರ್ಥಿಗಳಂತೆ ಉಚಿತ ಶಿಕ್ಷಣವನ್ನು ಮತ್ತು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ದಾಖಲಾತಿ ಬಯಸುವ ಹತ್ತನೇ ತರಗತಿಯಲ್ಲಿ ಶೇ 95ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಕಾಲೇಜು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಸಂಪೂರ್ಣ ಉಚಿತ ಶಿಕ್ಷಣ, ಶೇ90ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದಲ್ಲಿ ಸಂಪೂರ್ಣ ವಿನಾಯಿತಿ, ಶೇ 85ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಕಾಲೇಜು ಶುಲ್ಕದಲ್ಲಿ ವಿನಾಯಿತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಆಸಕ್ತ ವಿದ್ಯಾರ್ಥಿಗಳು ಮತ್ತು ಪೋಷಕರು ಸಂಸ್ಥೆಯ ಕಛೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆದು ಕೊಳ್ಳಬಹುದು ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಶಾಲಾ ಕಛೇರಿ : 8147454907 ಕಾಲೇಜು ಕಛೇರಿ : 8147454906, 7259500911 ಅನ್ನು ಸಂಪರ್ಕಿಸಬಹುದು.















.
.
.
.
.
.
.
.
.
.
