Share this news

 

 

 

 

ಕಾರ್ಕಳ,ಏ.03: ಶಾಸಕ ಸುನಿಲ್ ಕುಮಾರ್ ವಿರುದ್ಧ ಕಾಂಗ್ರೆಸ್ ಯುವ ಮುಖಂಡ ಯೋಗೀಶ್ ಆಚಾರ್ಯ ಇನ್ನಾ ಅವರು ಫೇಸ್ ಬುಕ್ ನಲ್ಲಿ ತೆಜೋವಧೆ ಮಾಡಿದ್ದಾರೆ ಎಂದು ಸುನಿಲ್ ಕುಮಾರ್ ಅವರು ಬೆಂಗಳೂರಿನ ನ್ಯಾಯಾಲಯದಲ್ಲಿ ಯೋಗೀಶ್ ಆಚಾರ್ಯ ವಿರುದ್ಧ ದಾವೆ ಹೂಡಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿ ಯೋಗೀಶ್ ಆಚಾರ್ಯ ಇನ್ನಾ ಅವರು ಸುನಿಲ್ ಕುಮಾರ್ ಅವರಲ್ಲಿ ಬೇಷರತ್ ಕ್ಷಮೆ ಯಾಚಿಸಬೇಕು ಹಾಗೂ ಪರಿಹಾರದ ಮೊತ್ತ ಪಾವತಿಸುವಂತೆ ಆದೇಶ ನೀಡಿತ್ತು. ಇದಾದ ಬಳಿಕ ಈ ಪ್ರಕರಣವನ್ನು ಕಾರ್ಕಳ ನ್ಯಾಯಾಲಯಕ್ಕೆ ವರ್ಗಾವಣೆಯಾಗಿತ್ತು.
ಕಾರ್ಕಳ ನ್ಯಾಯಾಲಯವು ಯೋಗೀಶ್ ಆಚಾರ್ಯ ಅವರು ಸುನಿಲ್ ಕುಮಾರ್ ಅವರಲ್ಲಿ ಕ್ಷಮೆ ಯಾಚಿಸಲು ಹಾಗೂ ಪರಿಹಾರ ಮೊತ್ತ ಪಾವತಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಅವರ ಬಂಧನಕ್ಕೆ ವಾರಂಟ್ ಜಾರಿಗೊಳಿಸಿತ್ತು. ಇದಾ ದ ಬಳಿಕ ಎರಡು ಬಾರಿ ನ್ಯಾಯಾಲಯದ ಅಮೀನರು ಬಂಧಿಸಿ ಕರೆತರಲು ಹೋದ ವೇಳೆ ಯೋಗೀಶ್ ಅವರು ಬರಲು ಒಪ್ಪಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು ಪೊಲೀಸ್ ಭದ್ರತೆಯೊಂದಿಗೆ ಬಂಧಿಸುವಂತೆ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರಿಗೆ ನ್ಯಾಯಾಲಯವು ನಿರ್ದೇಶನ ನೀಡಿದೆ.
ಈ ಪ್ರಕರಣದಲ್ಲಿ ಇನ್ನೋರ್ವ ಆರೋಪಿ ರಾಧಾಕೃಷ್ಣ ನಾಯಕ್ ಅವರು ನ್ಯಾಯಾಲಯದ ಆದೇಶದಂತೆ ನಡೆದುಕೊಂಡ ಹಿನ್ನೆಲೆಯಲ್ಲಿ ಅವರ ವಿರುದ್ಧದ ಪ್ರಕರಣ ಮುಕ್ತಾಯಗೊಳಿಸಲಾಗಿದೆ.

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

Leave a Reply

Your email address will not be published. Required fields are marked *