
ಬೆಂಗಳೂರು, ಏ. 04: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಖಾಸಗಿ ಆಸ್ಪತ್ರೆಗಳಿಗೆ ಮಹತ್ವದ ನಿರ್ದೇಶನ ಹೊರಡಿಸಿದೆ. ಮಕ್ಕಳ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ, ಪೋಕ್ಸೋ ಕಾಯ್ದೆ 2012ರಡಿ (POCSO Act) ಕಡ್ಡಾಯವಾಗಿ ವರದಿ ಸಲ್ಲಿಸುವಂತೆ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ.
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಪತ್ತೆಯಾದಾಗ ಖಾಸಗಿ ಆಸ್ಪತ್ರೆಗಳು ತಕ್ಷಣವೇ ಪೊಲೀಸ್ ಇಲಾಖೆ ಅಥವಾ ವಿಶೇಷ ಕಿಶೋರ ಪೊಲೀಸ್ ಘಟಕಕ್ಕೆ ಮಾಹಿತಿ ನೀಡಬೇಕು ಎಂದು ಇಲಾಖೆಯು ಸ್ಪಷ್ಟಪಡಿಸಿದೆ.
ಸಾಮಾನ್ಯವಾಗಿ ಇಂತಹ ಪ್ರಕರಣಗಳು ಆಸ್ಪತ್ರೆಗಳಿಗೆ ಮೊದಲು ತಿಳಿಯುವುದರಿಂದ ತಕ್ಷಣದ ಕ್ರಮ ಕೈಗೊಳ್ಳುವುದು ಅತ್ಯಂತ ಮುಖ್ಯವಾಗಿದೆ.ಸಂಕಷ್ಟದಲ್ಲಿರುವ ಮಕ್ಕಳಿಗೆ ನೆರವಾಗಲು ಚೈಲ್ಡ್ಲೈನ್ 1098 ಸೇವೆಯನ್ನು ಬಳಸಬಹುದಾಗಿದೆ.
ಈ ನಿಯಮಗಳನ್ನು ಪಾಲಿಸದ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.















.
.
.
.
.
.
.
.
.
.
