Share this news

 

 

ಕಾರ್ಕಳ,ಏ. 06: ಉಡುಪಿ ಹಾಗೂ ದ.ಕ.ಜಿಲ್ಲೆಯ ಕಾರ್ಯ ವ್ಯಾಪ್ತಿಯಲ್ಲಿ 8 ಶಾಖೆಗಳ ಮೂಲಕ ಆರ್ಥಿಕ ವ್ಯವಹಾರ ನಡೆಸುತ್ತಿರುವ ಕಾರ್ಕಳದ ರಾಜಾಪುರ ಸಾರಸ್ವತ ಸೊಸೈಟಿಯು 2025-26 ಸಾಲಿನಲ್ಲಿ 1,151 ಕೋಟಿಗೂ ಮೀರಿ ವ್ಯವಹಾರ ನಡೆಸಿ 5.02 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಕಡಾರಿ ರವೀಂದ್ರ ಪ್ರಭು ಹೇಳಿದ್ದಾರೆ.
ಅವರು ಶುಕ್ರವಾರ ಸೊಸೈಟಿಯ ರಾಜಾಪುರ ಸಭಾಭವನದಲ್ಲಿ ನಡೆದ ತ್ರಿಂಶತಿ ಸಂಭ್ರಮದಲ್ಲಿರುವ ಕಾರ್ಕಳದ ರಾಜಾಪುರ ಸಾರಸ್ವತ ಸೊಸೈಟಿಯ ನೂತನ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ ಮತ್ತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

1996ರಲ್ಲಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಂದ ಉದ್ಘಾಟಿಸಲ್ಪಟ್ಟ ಸಂಘವು ಇದೀಗ ತ್ರಿಂಶತಿ ಸಂಭ್ರಮದಲ್ಲಿದ್ದು, 4.78 ಕೋಟಿ ರೂ. ಪಾಲು ಬಂಡವಾಳ, 30.02 ಕೋಟಿ ರೂ. ಸ್ವಂತನಿಧಿ, 254.50 ಕೋಟಿ ರೂ. ಠೇವಣಿ ಹಾಗೂ 211.90 ಕೋಟಿ ರೂ. ಸಾಲ ನೀಡಿ ಸರ್ವಾಂಗಿಣ ಅಭಿವೃದ್ಧಿ ಸಾಧಿಸಿರುವುದು ಗ್ರಾಹಕರು ಸಂಸ್ಥೆಯ ಮೇಲೆ ಇಟ್ಟಿರುವ ವಿಶ್ವಾಸದ ಪ್ರತೀಕ ಹಾಗೂ ಸಂಸ್ಥೆಯಲ್ಲಿ ದುಡಿಯುವ ಸಿಬ್ಬಂದಿಗಳ ಪ್ರಾಮಾಣಿಕ ಪ್ರಯತ್ನದ ಫಲವಾಗಿದೆ ಎಂದರು.
ಸಂಘವು ಪ್ರಾರಂಭವಾಗಿ 30 ಸಂವತ್ಸರಗಳನ್ನು ಪೂರೈಸುತ್ತಿರುವ ಈ ಸಂದರ್ಭದಲ್ಲಿ ತ್ರಿಂಶತಿ ಸಂಭ್ರಮಾಚರಣೆ ಪ್ರಯುಕ್ತ ಕಾರ್ಯಕ್ರಮದಲ್ಲಿ ನೂತನ ವಾಣಿಜ್ಯ ಸಂಕೀರ್ಣ ಸಹಕಾರ “ಸಿಂದೂರ” ಇದರ ಲೋಕಾರ್ಪಣ ಕಾರ್ಯಕ್ರಮವು ಏ.26 ರಂದು ಜರಗಲಿದೆ. ಉದ್ಘಾಟಕರಾಗಿ ಉಡುಪಿ ಪೇಜಾವರ ಮಠದ ಪರಮಪೂಜ್ಯ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಪದ್ಮವಿಭೂಷಣ, ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆ, ದ.ಕ.ಜಿ.ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮತ್ತಿತರ ಗಣ್ಯರು ಉಪಸ್ಥಿತರಿರುವರು ಎಂದರು.

ಇದೇ ಸಂದರ್ಭ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ, ಕಾರ್ಯಕ್ರಮದ ಸಂಪೂರ್ಣ ಮಾಹಿತಿ ನೀಡಿ ತ್ರಿಂಶತಿ ಸಂಭ್ರಮವು ಯಶಸ್ವಿಯಾಗಿ, ಅಭೂತಪೂರ್ವವಾಗಿ ಜರುಗುವ ನಿಟ್ಟಿನಲ್ಲಿ ಸರ್ವರ ಸಹಕಾರ ಕೋರಲಾಯಿತು.
ಹಿರ್ಗಾನ ಲಕ್ಷ್ಮೀಪುರ ಶ್ರೀ ಆದಿಶಕ್ತಿ ಮಹಾಲಕ್ಷ್ಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಚೇತನ್ ನಾಯಕ್ ಕಲಂಬಾಡಿ ನಿಟ್ಟೆ ಹಾಗೂ ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಜಯರಾಮ ಪ್ರಭು ಗಂಪದಬೈಲು ಸೂಡ, ಕಾರ್ಕಳ ರಾಜಾಪುರ ಸಾರಸ್ವತ ಬ್ರಾಹ್ಮಣ ಸಂಘದ ಅಧ್ಯಕ್ಷ ಸದಾಶಿವ ಪ್ರಭು, ಕಾರ್ಕಳ ತಾಲೂಕು ರಾಜಾಪುರ ಸಾರಸ್ವತ ಬ್ರಾಹ್ಮಣ ಮಹಿಳಾ ಮಂಡಳಿಯ ಅಧ್ಯಕ್ಷೆ ಉಷಾ ನಾಯಕ್, ಪಳ್ಳಿ ರಾಜಾಪುರ ಸಾರಸ್ವತ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಅರುಣಾ ನಾಯಕ್, ಸ್ಮರಣ ಸಂಚಿಕೆ ಸಂಪಾದಕೀಯ ಮಂಡಳಿಯ ಸದಸ್ಯರಾದ ರಘುನಾಥ ನಾಯಕ್ ಉಡುಪಿ, ಶ್ರೀ ಮಹಾಲಕ್ಷ್ಮಿ ಮಹಿಳಾ ಯಕ್ಷಗಾನ ಮಂಡಳಿಯ ಅಧ್ಯಕ್ಷೆ ಮಾಧವಿ, ಯಕ್ಷಗಾನ ಕಲಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಡಾ. ಜನಾರ್ಧನ ನಾಯಕ್ ಅಜೆಕಾರು, ಸಂಘದ ಆಡಳಿತ ಮಂಡಳಿ ಸದಸ್ಯರು, ಮಾಜಿ ನಿರ್ದೇಶಕರು, ಶಾಖಾ ಸಲಹಾ ಸಮಿತಿಯ ಸದಸ್ಯರು, ಸಿಬ್ಬಂದಿ ವರ್ಗ, ಸಮಾಜದ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷ ನೀರೆ ರವೀಂದ್ರ ನಾಯಕ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ನಿರ್ದೇಶಕ ಹರೀಶ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಂದ್ರ ನಾಯಕ್ ವಂದಿಸಿದರು.

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

Leave a Reply

Your email address will not be published. Required fields are marked *