Share this news

 

 

 

ಮೈಸೂರು, ಏ.06: ಮುಂದಿನ ಎರಡು ವರ್ಷ ರಾಜ್ಯದ ಸಿಎಂ ಆಗಿ ಸಿದ್ಧರಾಮಯ್ಯನವರೇ ಮುಂದುವರಿಯಲಿದ್ದು,ಈ ಕುರಿತು ಹೈಕಮಾಂಡ್ ಸ್ಪಷ್ಟನೆ ಬೇಕಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಅವರು ಮೈಸೂರಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, 2023ರಲ್ಲಿ ಸಿದ್ದರಾಮಯ್ಯನವರೇ ಕರ್ನಾಟಕದ ಸಿಎಂ ಎಂದು ಪಕ್ಷದ ಹೈಕಮಾಂಡ್ ಘೋಷಣೆ ಮಾಡಿತ್ತು. ಅದರ ಅವಧಿ 2028ರ ವರೆಗೆ ಇದೆ. ನೀವೇ 5 ವರ್ಷ ಸಿಎಂ ಎಂದು ಹೈಕಮಾಂಡ್ ಪ್ರತ್ಯೇಕವಾಗಿ ಸ್ಪಷ್ಟೀಕರಣ ಕೊಡುವ ಅವಶ್ಯಕತೆ ಇಲ್ಲವೆಂದು ಗೃಹಸಚಿವ ಜಿ.ಪರಮೇಶ್ವರ್ ಹೇಳಿದರು.2013ರಲ್ಲಿ ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಹೈಕಮಾಂಡ್ ಘೋಷಣೆ ಮಾಡಿರಲಿಲ್ಲ. ಆದರೂ ಅವರು ಐದು ವರ್ಷ ಸಿಎಂ ಆಗಿದ್ದರು. ಈ ಬಾರಿಯೂ ಪೂರ್ಣಾವಧಿ ಮುಗಿಸಬೇಕು ತಾನೇ? ಹೈ ಕಮಾಂಡ್ ಯಾವ ಗೊಂದಲಗಳನ್ನೂ ಸೃಷ್ಟಿ ಮಾಡಿಲ್ಲ. ಯಾರು ಏನೇ ಹೇಳಿದರೂ ಅದು ಮುಖ್ಯವಲ್ಲ. ಸಿಎಂ ಸ್ಥಾನ ಬದಲಾವಣೆ ಮಾಡಬೇಕಾಗಿರುವುದು ಹೈಕಮಾಂಡ್ ಅಲ್ಲಿಯವರೆಗೆ ಯಾರು ಏನೇ ಮಾತನಾಡಿದರೂ ಅದು ವೈಯಕ್ತಿಕ ಅಭಿಪ್ರಾಯ ಆಗುತ್ತದೆ ಎಂದರು.

ಪAಚ ರಾಜ್ಯಗಳ ಚುನಾವಣೆ ಹಾಗೂ ಕರ್ನಾಟಕ ಉಪ ಚುನಾವಣೆ ಗದ್ದಲದಲ್ಲಿ ರಾಜ್ಯದ ನಾಯಕತ್ವ ಬದಲಾವಣೆ ವಿಚಾರ ಸ್ವಲ್ಪ ತಣ್ಣಗಾಗಿತ್ತು. ಆದರೆ ಇದೀಗ ಗೃಹ ಸಚಿವ ಜಿ ಪರಮೇಶ್ವರ್ ಪರವೇಶ್ವರ್ ಅವರ ಈ ಹೇಳಿಕೆಯಿಂದ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಅಸಮಾಧಾನಕ್ಕೆ ಕಾರಣವಾಗುವ ಎಲ್ಲಾ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

Leave a Reply

Your email address will not be published. Required fields are marked *