Share this news

 

 

 

 

 

 

 

ಬೆಂಗಳೂರು,ಏ.06: ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆAದು ಕೋರಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಚುನಾವಣೆಯಲ್ಲಿ ತಿರಸ್ಕೃತಗೊಂಡಿದ್ದ 279 ಅಂಚೆ ಮತಪತ್ರಗಳನ್ನು ಮರುಪರಿಶೀಲಿಸುವಂತೆ ನ್ಯಾಯಾಲಯ ಆದೇಶಿಸಿದೆ.

ಏನಿದು ಪ್ರಕರಣ?

ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಕಾಂಗ್ರೆಸ್ ಅಭ್ಯರ್ಥಿ ಹಾಲಿ ಶಾಸಕ ಟಿ.ಡಿ. ರಾಜೇಗೌಡ ಅವರ ವಿರುದ್ಧ ಅಲ್ಪ ಮತಗಳ ಅಂತರದಿAದ ಸೋತಿದ್ದರು. ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ನಡೆದಿದೆ ಮತ್ತು ನಿಯಮಬಾಹಿರವಾಗಿ ಮತಗಳನ್ನು ತಿರಸ್ಕರಿಸಲಾಗಿದೆ ಎಂದು ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಮೂರ್ತಿ ಆರ್. ನಟರಾಜ್ ಅವರಿದ್ದ ಏಕಸದಸ್ಯ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿ, ಎರಡು ವಾರಗಳ ಒಳಗಾಗಿ ವಿವಾದಿತ 279 ಅಂಚೆ ಮತಪತ್ರಗಳನ್ನು ಮರುಪರಿಶೀಲನೆ ನಡೆಸಿ, ಹೊಸದಾಗಿ ಫಲಿತಾಂಶ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ತನ್ನದೇ ಆದೇಶಕ್ಕೆ ತಡೆ ನೀಡಿದ ನ್ಯಾಯಾಲಯ!
ಹೈಕೋರ್ಟ್ ಆದೇಶ ಹೊರಬೀಳುತ್ತಿದ್ದಂತೆಯೇ ಶಾಸಕ ಟಿ.ಡಿ. ರಾಜೇಗೌಡ ಅವರ ಪರ ವಕೀಲರು, ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಬೇಕಿದೆ. ಆದ್ದರಿಂದ ಈ ಆದೇಶಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿದರು. ಈ ಮನವಿಗೆ ಡಿ.ಎನ್. ಜೀವರಾಜ್ ಪರ ವಕೀಲೆ ವಂದನಾ ಪಿ.ಎಲ್. ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರಾದರೂ, ನ್ಯಾಯಾಲಯವು ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ನೀಡುವ ಉದ್ದೇಶದಿಂದ ತನ್ನದೇ ಆದೇಶಕ್ಕೆ ಎರಡು ವಾರಗಳ ಕಾಲ ಮಧ್ಯಂತರ ತಡೆ ನೀಡಿದೆ
ಈ ಪ್ರಕರಣದ ಹಿನ್ನಲೆಯಲ್ಲಿ ಶೃಂಗೇರಿ ಕ್ಷೇತ್ರದ ಚುನಾವಣಾ ಫಲಿತಾಂಶದ ಭವಿಷ್ಯ ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

Leave a Reply

Your email address will not be published. Required fields are marked *