
ಕಾರ್ಕಳ, ಏ.10: ತಾಲೂಕಿನ ಅಜೆಕಾರು ಪದ್ಮ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಉದ್ಘಾಟನೆ ಹಾಗೂ ಪದ್ಮನಗರದಲ್ಲಿ ನಿರ್ಮಾಣಗೊಂಡ ಸಂಪೂರ್ಣ ಶಿಲಾಮಯ ದೇವಸ್ಥಾನದಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಏ.10 ರಿಂದ 14 ರ ವರೆಗೆ ನಡೆಯಲಿದೆ.
ಎ.10ರಂದು ಕುಕ್ಕುಂದೂರು ಗಣಿತನಗರ ಶ್ರೀ ಮಹಾಗಣಪತಿ ದೇವಸ್ಥಾನದಿಂದ ಪ್ರತಿಷ್ಠಾಪನೆಗೊಳ್ಳಲಿರುವ ದೇವರ ವಿಗ್ರಹದ ಭವ್ಯ ಮೆರವಣಿಗೆ ನಡೆಯಲಿದೆ.ಸಂಜೆ 5 ರಿಂದ ಅಜೆಕಾರು ರಾಮಮಂದಿರದಿಂದ ಹಸಿರು ಹೊರೆಕಾಣಿಕೆ ಮೆರವಣಿಗೆ ನಡೆಯಲಿದ್ದು, ಬಳಿಕ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಲಿದೆ.
ಎ11ರಂದು ನವಗ್ರಹ ಯಾಗ, ಅಥರ್ವಶಿರ್ಷ ಮಹಾಗಣಯಾಗ, ಗಣಪತಿ ದೇವರ ಬಿಂಬ ಶುದ್ದಿ ಹಾಗೂ ಸಂಜೆ 5 ರಿಂದ ಬ್ರಹ್ಮಕಲಶ ಮಂಡಲ ರಚನೆ, ಮಂಡಲ ಪೂಜೆ , ಮಹಾಗಣಪತಿ ದೇವರ ಬಿಂಬ ಶಯ್ಯಾದಿವಾಸ ನಡೆಯಲಿದೆ.
ಎ.12ರಂದು ಹೋಮ ಶಿಖರಪ್ರತಿಷ್ಠೆ ಬ್ರಹ್ಮಕಲಶಾಭಿಷೇಕ, ಕಲ್ಫೋಕ್ತ ಪೂಜೆ, ಮಹಾಪೂಜೆ, ಬ್ರಾಹ್ಮಣ ಸುವಾಸಿನಿ ಆರಾಧನೆನಡೆಯಲಿದೆ. ಬೆಳಗ್ಗೆ 11 ರಿಂದ ಶ್ರೀ ವಿಷ್ಣುಸಹಸ್ರನಾಮ ಪಠಣ ಮಧ್ಯಾಹ್ನ 1ಕ್ಕೆ ಅನ್ನಸಂತರ್ಪಣೆ ನಡೆಯಲಿದೆ.
ಧಾರ್ಮಿಕ ಸಭೆಯಲ್ಲಿ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಫಲಪುಷ್ಪ ಸಮರ್ಪಣೆಯನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮೋಹನ್ ಆಳ್ವ ನೇರವೇರಿಸಲಿದ್ದಾರೆ.ಮಾಜಿ ಸಚಿವ ಶಾಸಕ ಸುನೀಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಆಭಯಚಂದ್ರ ಜೈನ್, ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಸಮಿತಿ
ಗೌರವಾಧ್ಯಕ್ಷ ಶಿವರಾಮ ಶೆಟ್ಟಿ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಮಾಜಿ ಶಾಸಕ ರಘುಪತಿ ಭಟ್, ಬಳ್ಳಾರಿ ಮಾರ್ಕೆಟ್ ಟ್ರಸ್ಟ್ ಅಧ್ಯಕ್ಷ ಎಂ.ಜಿ. ಗೌಡ, ಉದ್ಯಮಿ ಮಹೇಶ್ ಶೆಟ್ಟಿ ಕುಡುಪುಲಾಜೆ, ಉದ್ಯಮಿ ಶಶಿಧರ ಶೆಟ್ಟಿ,
ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ನ ಆಡಳಿತ ಮಂಡಳಿ ಸದಸ್ಯ ಡಾ| ಸಂತೋಷ್ ಕುಮಾರ್‌ಶೆಟ್ಟಿ ಅಜೆಕಾರು ಭಾಗವಹಿಸಲಿದ್ದಾರೆ
ಏ.11 ರಂದು ಸಂಜೆ 7ಕ್ಕೆ ಜಗದೀಶ ಆಚಾರ್ಯ ಪುತ್ತೂರು ಮತ್ತು ಬಳಗದವರಿಂದ ಭಕ್ತಿ ಗಾನ ವೈಭವ, ಎ.12 ಕ್ಕೆ ಆಧ್ಯಾ ಮಲ್ಯ ಅಜೆಕಾರು ಅವರಿಂದ ಭಕ್ತಿ ಸಂಗೀತ ಕಾರ್ಯಕ್ರಮ, ಸಂಜೆ 7ಕ್ಕೆ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಎ.13 ಹಾಗೂ ಎ14 ರಂದು ಭಜನ ಸುಧಾ ನಡೆಯಲಿದೆ.
ಎ.14 ರ ಸಂಜೆ 5.30 ಕ್ಕೆ ಪದ್ಮ ಜಿ. ಶೆಟ್ಟಿ ಅವರ ಜನಶತಮಾನೋತ್ಸವದ ಪ್ರಯುಕ್ತ ಅಜೆಕಾರು ಜ್ಞಾನ ಸುಧಾ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಲೋಕಾರ್ಪಣೆ ನಡೆಯಲಿದೆ.
ಮಾಜಿ ಸಚಿವ ಶಾಸಕ ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಅವರು ಪದವಿ ಪೂರ್ವ ಕಾಲೇಜು ಉದ್ಘಾಟಿಸಲಿದ್ದಾರೆ. ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿಭಾಗವನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಯ ಡಾ| ಮೋಹನ್ ಆಳ್ವ ಉದ್ಘಾಟಿಸಲಿದ್ದಾರೆ. ನಿಟ್ಟೆ ಡಾ| ವಿಶಾಲ್ ಹೆಗ್ಡೆ ಹಾಗೂ ಉದ್ಯಮಿ ಶಿವರಾಮ್ ಜಿ. ಶೆಟ್ಟಿ ಪ್ರಯೋಗಶಾಲೆ ಉದ್ಘಾಟಿಸಲಿದ್ದಾರೆ.
















.
.
.
.
.
.
.
.
.
.
