
ಕಾರ್ಕಳ, ಏ.11: ಬೈಲೂರಿನ ಉಮಿಕಲ್ ಬೆಟ್ಟದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಮುತ್ತಲಿನ ಗಿಡ ಮರಗಳು ಅಗ್ನಿಗೆ ಆಹುತಿಯಾಗಿವೆ.
ಶನಿವಾರ ಮಧ್ಯಾಹ್ನ ಹಠಾತ್ತನೆ ಹೊತ್ತಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಸುತ್ತಲೂ ವ್ಯಾಪಿಸಿತ್ತು, ಕೂಡಲೇ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿಯನ್ನು ಹತೋಟಿಗೆ ತಂದು ಹೆಚ್ಚಿನ ಅನಾಹುತ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಠಾಣಾಧಿಕಾರಿ ಅಲ್ಬರ್ಟ್ ಮೋನಿಶ್, ಸಹಾಯಕ ಠಾಣಾಧಿಕಾರಿ ಚಂದ್ರಶೇಖರ್, ಸಿಬ್ಬಂದಿ ಹರಿಶ್ಚಂದ್ರ ಶೆಟ್ಟಿಗಾರ್, ಅಚ್ಯುತ ಕರ್ಕೇರ, ಹರೀಶ್ ಮತ್ತು ಬಸವರಾಜ್ ಪಾಲ್ಗೊಂಡಿದ್ದರು.
















.
.
.
.
.
.
.
.
.
.
