
ಹೆಬ್ರಿ, ಏ.15: ಕಾರ್ಕಳ ಕಡೆಯಿಂದ ಹೆಬ್ರಿ ಮಾರ್ಗವಾಗಿ ತೀರ್ಥಹಳ್ಳಿ ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರಿಗೆ ರಿಕ್ಷಾ ಏಕಾಎಕಿ ಅಡ್ಡಬಂದ ಪರಿಣಾಮ ಅಪಘಾತ ತಪ್ಪಿಸಲು ಕಾರು ಚಾಲಕ ಕಾರನ್ನು ಬಲಕ್ಕೆ ತಿರುಗಿಸಿದಾಗ ನಿಯಂತ್ರಣ ತಪ್ಪಿದ ಕಾರು ಚರಂಡಿಗೆ ಬಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಹಾಗೂ ಮಗುವಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಬುಧವಾರ ಮುನಿಯಾಲಿನ ಚಟ್ಕಲ್ ಪಾದೆ ಎಂಬಲ್ಲಿ ಸಂಭವಿಸಿದೆ.
ಮುನಿಯಾಲಿನ ಡಿಗ್ರಿ ಕಾಲೇಜಿನ ಬಳಿ ರಿಕ್ಷಾ ಚಾಲಕ ತನ್ನ ರಿಕ್ಷಾವನ್ನು ಬಲಕ್ಕೆ ತಿರುಗಿಸಲು ಮುಂದಾದಾಗ ರಾಜ್ಯ ಹೆದ್ದಾರಿಯಲ್ಲಿ ಅತೀವೇಗವಾಗಿ ಬರುತ್ತಿದ್ದ ಇನ್ನೋವಾ ಕಾರು ಚಾಲಕ ಅಪಘಾತ ತಪ್ಪಿಸಲು ಕಾರನ್ನು ಬಲಕ್ಕೆ ತಿರುಗಿಸಿದಾಗ ಚರಂಡಿಗೆ ಬಿದ್ದಿದೆ. ಇದೇವೇಳೆ ಹೆಬ್ರಿ ಕಡೆಯಿಂದ ಬರುತ್ತಿದ್ದ ಬೈಕ್ ಸವಾರ ಅಪಾಯವನ್ನು ಅರಿತು ದೂರದಲ್ಲಿ ಬೈಕ್ ನಿಲ್ಲಿಸಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ.

















.
.
.
.
.
.
.
.
.
.
