
ಬೆಂಗಳೂರು,ಏ.16: ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅವರನ್ನು ಹೈಕೋರ್ಟ್ ರಿಜಿಸ್ಟಾçರ್ ಜನರಲ್ ವರ್ಗಾವಣೆಗೊಳಿಸಿ ಆದೇಶಿಸಿದ್ದಾರೆ. ಅವರು ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರಾಗಿ ವರ್ಗಾವಣೆಗೊಳಿಸಿ ಹೈಕೋರ್ಟ್ ರಿಜಿಸ್ಟಾçರ್ ಜನರಲ್ ಕೆ.ಎಸ್. ಭರತ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನ ಪ್ರಧಾನ ಜಿಲ್ಲಾ ನ್ಯಾಯಾಧೀಶರಾಗಿ ಸಂತೋಷ ಗಜಾನನ ಭಟ್ ಅವರನ್ನು ವರ್ಗಾವಣೆ ಮಾಡಿದ್ದು, ಇದರ ಜೊತೆಗೆ 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾಯಿಸಿ ಕೆ ಎಸ್ ಭರತ್ ಕುಮಾರ್, ಆದೇಶ ಹೊರಡಿಸಿದ್ದಾರೆ. ಪ್ರತಿವರ್ಷ ನಡೆಯುವ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯಂತೆ ವರ್ಗಾವಣೆ ನಡೆಸಲಾಗಿದೆ, ಜೂನ್ 1 ರಿಂದ ಹೊಸ ಕಾರ್ಯಭಾರ ವಹಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಬಿಜೆಪಿ ಕಾರ್ಯಕರ್ತ ಯೋಗೀಶ್ ಗೌಡ ಅವರ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅವರಿಗೆ ಶಿಕ್ಷೆ ವಿಧಿಸಿ ನಿನ್ನೆಯಷ್ಟೇ ತೀರ್ಪು ಪ್ರಕಟಿಸಿದ್ದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಹಲವಾರು ಹೈಪ್ರೊಫೈಲ್ ಕೇಸ್ ಗಳಲ್ಲಿನ ಮಹತ್ವದ ತೀರ್ಪು ನೀಡಿದ್ದಾರೆ.
















.
.
.
.
.
.
.
.
.
.
