
ಕಾರ್ಕಳ, ಏ.22: ಹಲಸಿನ ಹಣ್ಣಿನ ಮೌಲ್ಯ ವರ್ಧನೆಯ ನಿಟ್ಟಿನಲ್ಲಿ ವಿವಿಧ ಬಗೆಯ ಹಲಸಿನ ಹಣ್ಣುಗಳ ಪ್ರದರ್ಶನ ಹಾಗೂ ಖಾದ್ಯಗಳನ್ನು ಪರಿಚಯಿಸುವ ಬೃಹತ್ ಹಲಸು ಮೇಳವು ಕಾರ್ಕಳದ ಬಿಲ್ಲವ ಸಭಾಭವನದಲ್ಲಿ ಏ. 25ರಿಂದ 26ರವರೆಗೆ ನಡೆಯಲಿದೆ ಎಂದು ರೋಟರಿ ಕ್ಲಬ್ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಹೇಳಿದರು. ಅವರು ಏ.22ರಂದು ಬುಧವಾರ ಕಾರ್ಕಳ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಹಲಸು ಮೇಳವು ಬೆಳಿಗ್ಗೆ 10 ಗಂಟೆಯಿAದ ರಾತ್ರಿ 9 ಗಂಟೆಯವರೆಗೆ ನಡೆಯಲಿದ್ದು, ಹಲಸಿನ ಹಣ್ಣಿನಲ್ಲಿರುವ ಪೌಷ್ಟಿಕ ಹಾಗೂ ಔಷಧೀಯ ಗುಣಗಳ ಬಗ್ಗೆ ವಿವರಿಸಿ, ಗ್ರಾಮೀಣ ಸೊಗಡನ್ನು ಇಂದಿನ ಯುವಜನತೆಗೆ ಪರಿಚಯಿಸುವ ಉದ್ದೇಶದಿಂದ ಈ ಮೇಳವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು. ಹಲಸು ಮೇಳದಲ್ಲಿ ಇಳಕಲ್ ಖಾದಿ ಸೀರೆಗಳು, ಗೃಹಬಳಕೆಯ ವಸ್ತುಗಳು, ಬಿದಿರು ಉತ್ಪನ್ನಗಳು, ದೀಪಾಲಂಕೃತ ಮಣ್ಣಿನ ಮಡಕೆಗಳು ಸೇರಿದಂತೆ 70ಕ್ಕೂ ಹೆಚ್ಚು ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಇರಲಿದೆ. ಜೊತೆಗೆ ಭಜನಾ ಸಪ್ತಸ್ವರ, ಸಂಗೀತ ಸ್ಪರ್ಧೆಗಳು ಹಾಗೂ ಹಲಸಿನ ವಿವಿಧ ಖಾದ್ಯಗಳ ಪ್ರದರ್ಶನವೂ ನಡೆಯಲಿದೆ ಎಂದರು.
ಗಣೇಶ್ ಶೆಟ್ಟಿ ಮಾತನಾಡಿ, ಹಲಸಿಗೆ ಮೌಲ್ಯವರ್ಧನೆ ನೀಡುವುದು ಮೇಳದ ಮುಖ್ಯ ಉದ್ದೇಶವಾಗಿದ್ದು, ವಿವಿಧ ರಾಜ್ಯಗಳ ಹಲಸಿನ ಜಾತಿಗಳನ್ನು ಪರಿಚಯಿಸಲಾಗುವುದು ಎಂದು ಹೇಳಿದರು. ರೈತರು ನೇರವಾಗಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವ ಅವಕಾಶವೂ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಂಶಿ ಇವೆಂಟ್ಸ್ ನ ರಮಿತಾ ಸೂರ್ಯವಂಶಿ, ವಾಸುದೇವ ಭಟ್, ಯುವವಾಹಿನಿಯ ಅಧ್ಯಕ್ಷ ಪ್ರಕಾಶ್ ಪೂಜಾರಿ ಕೆರ್ವಾಶೆ, ಭಾಸ್ಕರ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.


.
.
.
.
.
.
.
.
.
.

ಕಾರ್ಕಳ, ಏ. 20: ಕಾರ್ಕಳ ತಾಲೂಕು ಮರ್ಣೆ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆನಂದ ಸೆರ್ವೆಗಾರ್ (65ವ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಅವರು ಕಳೆದ 15 ವರ್ಷಗಳಿಂದ ಮರ್ಣೆ ಗ್ರಾಮದ ವಸಂತ ಶೆಟ್ಟಿಯವರ ಕುಂಠಿನಿ ಮನೆ ಎಂಬಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು.ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದ ಅವರು ಅದೇ ಕಾರಣಕ್ಕೆ ಮನನೊಂದು ನಿನ್ನೆ(ಏ.19) ರಾತ್ರಿ ಮನೆಯ ಮುಂಭಾಗದ ಮಾವಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



.
.
.
.
.
.
.
.
.
.
