
ಬೆಂಗಳೂರು,ಏ.23: 2025-26ನೆ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಇಂದು (ಏ.23) ಪ್ರಕಟಗೊಂಡಿದ್ದು, ಶೇ. 98.40 ಫಲಿತಾಂಶ ಪಡೆದ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದರೆ, ಶೇ. 98.18 ಫಲಿತಾಂಶದೊAದಿಗೆ ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಶೇ.85.06 ಫಲಿತಾಂಶದೊAದಿಗೆ ಕಲಬುರಗಿಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಈ ವಿಚಾರ ಇದೀಗ ರಾಜಕೀಯ ಪಕ್ಷಗಳಿಗೆ ಅಸ್ತçವಾಗಿದ್ದು, ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಗುರಿಯಾಗಿಸಿ ವಾಗ್ದಾಳಿ ನಡೆಸಿವೆ. ಸ್ವಂತ ಜಿಲ್ಲೆಯ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಖರ್ಗೆ ಕುಟುಂಬ ವಿಫಲವಾಗಿದೆ ಎಂದು ವ್ಯಂಗ್ಯವಾಡಿವೆ.
ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಕಲಬುರಗಿ ಈ ಬಾರಿ ಮಾತ್ರವಲ್ಲದೇ, ಹಿಂದಿನ ಸಾಲಿನಲ್ಲಿಯೂ 34ನೇ ಸ್ಥಾನದಲ್ಲಿತ್ತು. 4-5 ದಶಕಗಳಿಂದ ಕಲಬುರಗಿ ಜಿಲ್ಲೆ ಆಳುತ್ತಿರುವ ಖರ್ಗೆ ಕುಟುಂಬ ಸ್ವಂತ ಜಿಲ್ಲೆಯ ಮಕ್ಕಳ ಭವಿಷ್ಯ ರೂಪಿಸುವಲ್ಲಿ ವಿಫಲವಾಗಿರುವುದು ನಾಚಿಕೆಗೇಡಿನ ಸಂಗತಿ. ಕಲಬುರಗಿ ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ, ಶಿಕ್ಷಕರ ನೇಮಕ ಸೇರಿದಂತೆ ಶಿಕ್ಷಣದ ಪ್ರಗತಿಗೆ ಅಗತ್ಯವಿರುವ ಮೂಲಸೌಕರ್ಯ ಕಲ್ಪಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದೀರಿ ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ. ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಅವರೇ, ನಿಮ್ಮ ಭಾಷಣದ “ಸಾಧನೆ”ಗೆ ಈ ಫಲಿತಾಂಶವನ್ನು ಸೇರಿಸಿಕೊಳ್ಳಿ. ಕಲಬುರಗಿಯನ್ನು ಅಕ್ಷರಶಃ ಶೈಕ್ಷಣಿಕ ಅಂಧಕಾರಕ್ಕೆ ದೂಡಿದ್ದೀರಿ. ಮಾತಿನಲ್ಲಿ ತೋರಿಸುವ ಶೌರ್ಯ ಶಿಕ್ಷಣದ ಸುಧಾರಣೆಯಲ್ಲಿ ತೋರಿಸಿ ಎಂದಿರುವ ಜೆಡಿಎಸ್ ಪ್ರಿಯಾಂಕ್ ಖರ್ಗೆಯನ್ನು ನಾಟಿಕೋಳಿ ಮಿನಿಸ್ಟರ್ ಎಂದು ವ್ಯಂಗ್ಯವಾಡಿದೆ.


.
.
.
.
.
.
.
.
.
.
.
.
.
.
.
.
.
.
.
.
