
ಕಾರ್ಕಳ,ಏ.23: ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯನ್ನು ಮಾಡಿದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳದ ಸಂಸ್ಥೆಯು ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಮಾಜಿಕ ರಂಗದಲ್ಲಿ ಅನೇಕ ಕಾರ್ಯ ಚಟುವಟಿಕೆಯ ಮೂಲಕ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿರುವ ಸಂಸ್ಥೆಯು ಇದೀಗ ಸಹಕಾರ ಕ್ಷೇತ್ರದಲ್ಲೂ ತನ್ನನ್ನು ತೊಡಗಿ ಸಿಕೊಂಡು ಹೊಸ ಮೈಲುಗಲ್ಲೊಂದನ್ನು ನಿರ್ಮಿಸಿದೆ. ಸಪ್ತ ಸಂಸ್ಥಾಪಕರ ಕನಸಿನ ಕೂಸಾದ ಕ್ರಿಯೇಟಿವ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ನಿ. ಕಾರ್ಕಳದ ಕುಕ್ಕುದಕಟ್ಟೆ ಸರ್ಕಲ್ ನಲ್ಲಿರುವ ಪಿಂಟೋ ಟವರ್ಸ್ ನ ಮೊದಲ ಮಹಡಿಯಲ್ಲಿ ಶುಭಾರಂಭಗೊAಡಿತು.
ಕ್ರಿಯೇಟಿವ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಇದರ ಲೋಕಾರ್ಪಣೆ ನಿಮಿತ್ತ ಸಭಾ ಕಾರ್ಯಕ್ರಮ ಕ್ರಿಯೇಟಿವ್ ಕಾಲೇಜಿನ ಸಪ್ತ ಸ್ವರ ವೇದಿಕೆಯಲ್ಲಿ ಜರುಗಿತು.
ಕಾರ್ಕಳ ಶಾಸಕ ಸುನಿಲ್ ಕುಮಾರ್ ನೂತನ ಸೊಸೈಟಿಯನ್ನು ಉದ್ಘಾಟಿಸಿ ಮಾತನಾಡಿ, ಕ್ರಿಯೇಟಿವ್ ಸಂಸ್ಥೆಯು ಕೇವಲ ಕ್ಯಾಂಪಸ್ ಒಳಗಡೆ ಮಾತ್ರ ತನ್ನ ಕಾರ್ಯ ಚಟುವಟಿಕೆಗಳನ್ನು ಸೀಮಿತಗೊಳಿಸದೆ ಕ್ಯಾಂಪಸ್ ನ ಹೊರಗಡೆ ಅಂದರೆ ಹತ್ತಾರು ಮಂದಿಗೆ ಧ್ವನಿಯಾಗಬಲ್ಲ ಅನೇಕ ಸಾಮಾಜಿಕ ಕಾರ್ಯ ಚಟುವಟಿಕೆಗಳನ್ನು ಯೋಜಿಸಿರುವುದು ಅತ್ಯಂತ ಶ್ಲಾಘನೀಯ.ಅದರ ಒಂದು ಕಾರ್ಯವೇ ಈ ಸೊಸೈಟಿಯ ಪರಿಕಲ್ಪನೆಯಾಗಿದೆ. ಈ ಸೊಸೈಟಿಯಿಂದಾಗಿ ಊರಿನ ಅನೇಕ ಜನರಿಗೆ ಒಳಿತಾಗಲಿ, ಸಾಲ ಸೌಲಭ್ಯಗಳು ಸಿಗುವಂತಾಗಲಿ ಎಂದು ಆಶಿಸಿದರು.
ಮುಖ್ಯ ಅತಿಥಿಗಳಾಗಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಮಾತನಾಡಿ, ಕಠಿಣ ಪರಿಸ್ಥಿತಿಯಲ್ಲೂ ಕೂಡ ವಿಚಲಿತರಾಗದೆ ಹೇಗೆ ಮುನ್ನಡೆಯಬೇಕೆಂಬುದಕ್ಕೆ ಈ ವಿದ್ಯಾ ಸಂಸ್ಥೆಯ ಸಂಸ್ಥಾಪಕರುಗಳೇ ಸಾಕ್ಷಿ. ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಕ್ರಿಯೇಟಿವ್ ಸಂಸ್ಥೆಯು ರಾಜ್ಯದಲ್ಲಿಯೇ ಮುಂಚೂಣಿಯಲ್ಲಿದೆ. ಶೈಕ್ಷಣಿಕ ರಂಗದಲ್ಲಿ ಮಾತ್ರವಲ್ಲದೆ ಇಂದು ಸಹಕಾರ ರಂಗಕ್ಕೂ ಕೂಡ ಸಂಸ್ಥೆಯು ತನ್ನ ಕಾರ್ಯ ಚಟುವಟಿಕೆಯನ್ನು ವಿಸ್ತರಿಸಿದೆ.ಇದರಿಂದ ಈ ಭಾಗದಲ್ಲಿನ ಜನಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಇಂತಹ ಬ್ಯಾಂಕಿನ ಅವಶ್ಯಕತೆ ತುಂಬಾ ಇತ್ತು.ಅದನ್ನು ಕ್ರಿಯೇಟಿವ್ ಸಂಸ್ಥಾಪಕರು ಈಡೇರಿಸುವ ಮೂಲಕ ಜನರಿಗೆ ಅನುಕೂಲವನ್ನು ಮಾಡಿಕೊಟ್ಟಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯ ಕೆ.ಆರ್, ರಾಜ್ಯ ಕ್ರಷರ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ,ಹಿರ್ಗಾನ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಕ್ರಿಯೇಟಿವ್ ಸಂಸ್ಥೆಯ ಸಹ ಸಂಸ್ಥಾಪಕ ಆದರ್ಶ ಎಂ.ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನಸಾಮಾನ್ಯರು ಇಂದು ಆರ್ಥಿಕವಾಗಿ ಸಬಲರಾಗಿ ನೆಮ್ಮದಿಯಾಗಿ ಜೀವನ ನಡೆಸುವಲ್ಲಿ ಸಹಕಾರಿಯಾಗಿದ್ದು ಸಹಕಾರ ಸಂಘಗಳು. ಈ ಹಿನ್ನೆಲೆಯನ್ನು ಗಮನದಲ್ಲಿಟ್ಟುಕೊಂಡು ನಾವು ಕ್ರಿಯೇಟಿವ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯನ್ನು ಪ್ರಾರಂಭಿಸಿದ್ದೇವೆ.ಇದನ್ನು ಪಾಲಿಸಿ ಪೋಷಿಸಿ ಬೆಳೆಸುವಲ್ಲಿ ತಾವೆಲ್ಲರೂ ನಮ್ಮೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.


.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
