
ಬೆಂಗಳೂರು,ಏ.25: ರಾಜ್ಯದ ಮದ್ಯಪ್ರಿಯರಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮತ್ತೊಂದು ಆಘಾತ ನೀಡಲು ಸಜ್ಜಾಗಿದೆ. ಮೇ 1 ರಿಂದ ಹೊಸ ಅಬಕಾರಿ ನೀತಿ ಜಾರಿಗೆ ಬರಲಿದ್ದು, ಮದ್ಯದ ದರದಲ್ಲಿ ಶೇ 20ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ.
ಸರ್ಕಾರವು ಹೊರಡಿಸಿರುವ ಕರಡು ಅಧಿಸೂಚನೆಯಂತೆ, ಇನ್ನು ಮುಂದೆ ಮದ್ಯದ ಬಾಟಲಿಯಲ್ಲಿರುವ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ವಿಧಿಸಲಾಗುತ್ತದೆ. ಅಂದರೆ, ಮದ್ಯದಲ್ಲಿ ಆಲ್ಕೋಹಾಲ್ ಅಂಶ ಹೆಚ್ಚಿದ್ದಷ್ಟೂ ತೆರಿಗೆ ಹೆಚ್ಚಾಗಲಿದೆ. ಈ ಹೊಸ ನೀತಿಯಿಂದಾಗಿ ಕಡಿಮೆ ಆಲ್ಕೋಹಾಲ್ ಹೊಂದಿರುವ ಪ್ರೀಮಿಯಂ ಮದ್ಯದ ಬೆಲೆ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗುವ ಸಾಧ್ಯತೆಯಿದ್ದರೂ, ಸಾಮಾನ್ಯ ಜನರು ಬಳಸುವ ಮದ್ಯದ ಬೆಲೆ ಶೇ 20ರಷ್ಟು ಏರಿಕೆಯಾಗಲಿದೆ.
ರಾಜ್ಯದ ಒಟ್ಟು ಅಬಕಾರಿ ಆದಾಯದಲ್ಲಿ ಶೇ 80ರಷ್ಟು ಪಾಲು ಹೊಂದಿರುವ ಮೊದಲ ನಾಲ್ಕು ಸ್ಲ್ಯಾಬ್‌ಗಳ ಮದ್ಯದ ಬೆಲೆ ಗಣನೀಯವಾಗಿ ಹೆಚ್ಚಾಗಲಿದೆ. ವಿಸ್ಕಿ, ರಮ್, ಬ್ರಾಂಡಿ ಮತ್ತು ಜಿನ್ ಬೆಲೆಯಲ್ಲಿ ಒಂದು ಕ್ವಾರ್ಟರ್‌ಗೆ 15 ರಿಂದ 25 ರೂಪಾಯಿಗಳಷ್ಟು ಏರಿಕೆಯಾಗುವ ಸಾಧ್ಯತೆಯಿದೆ.


.
.
.
.
.
.
.
.
.
.
.
.
.
.
.
.
.
.
.
.
