
ಮಂಗಳೂರು,ಏ.27: ಮಂಗಳೂರಿನಲ್ಲಿ ಚಲಿಸುತ್ತಿದ್ದ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಪೋಟದ ಪ್ರಕರಣದಲ್ಲಿ ಬಂಧಿತನಾಗಿ ಬಳಿಕ ಸುಧೀರ್ಘ ವಿಚಾರಣೆಯಲ್ಲಿ ಆರೋಪಿಯಾಗಿದ್ದ ಮೊಹಮ್ಮದ್ ಶಾರೀಕ್ ಎಸಗಿದ್ದ ಅಪರಾಧ ಸಾಬೀತಾದ ಹಿನ್ನಲೆಯಲ್ಲಿ ಎನ್ಐಎ ನ್ಯಾಯಾಲಯವು ಅಪರಾಧಿ ಮೊಹಮ್ಮದ್ ಶಾರೀಕ್ಗೆ ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ.
ಕಳೆದ 2022ರ ನವೆಂಬರ್ 19ರಂದು ಸಂಜೆ 4.40ರ ಸುಮಾರಿಗೆ ಮಂಗಳೂರಿನ ಕಂಕನಾಡಿನ ಬಳಿ ಚಲಿಸುತ್ತಿದ್ದ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಪೋಟವಾಗಿತ್ತು. ಆರೋಪಿಯಾಗಿದ್ದ ಮೊಹಮ್ಮದ್ ಶಾರೀಕ್ ಪ್ರಯಾಣಿಕನ ಸೋಗಿನಲ್ಲಿ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸಾಗಿಸುತ್ತಿದ್ದಾಗಲೇ ಸ್ಪೋಟವಾಗಿತ್ತು. ಈ ಪ್ರಕರಣದ ಜಾಡು ಹಿಡಿದು ತನಿಖೆ ನಡೆಸಿದ ಎನ್ಐಎ ಅಧಿಕಾರಿಗಳ ಬಳಿ ದೇವಸ್ಥಾನಗಳನ್ನು ಗುರಿಯಾಗಿಸಿ ಈ ಕೃತ್ಯ ಎಸಗಲು ಸಂಚು ರೂಪಿಸಿರುವುದು ಬಯಲಾಗಿತ್ತು. ಎನ್ಐಎ ಅಧಿಕಾರಿಗಳು 2024ರಲ್ಲಿ ಚಾರ್ಜ್ಶೀಟ್ ಸಲ್ಲಿಸಿದ್ದರು. ಸ್ಪೋಟ ಪ್ರಕರಣದ ಆರೋಪಿಯಾಗಿದ್ದ ಶಾರೀಕ್ ನ್ಯಾಯಾಲಯಕ್ಕೆ ತಪ್ಪೊಪ್ಪಿಗೆ ಅರ್ಜಿ ಸಲ್ಲಿಸಿದ್ದ. ಈತನ ಅರ್ಜಿ ಪುರಸ್ಕರಿಸಿದ ನ್ಯಾಯಾಲಯವು ಶಾರೀಕ್ ತಪ್ಪಿತಸ್ಥ ಎಂದು ಘೋಷಿಸಿದೆ.
ಇಂದು ಅಪರಾಧಿ ಮೊಹಮ್ಮದ್ ಶಾರೀಕ್ ಗೆ ಇಂದು ಎನ್ಐಎ ನ್ಯಾಯಾಲಯವು ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ.


.
.
.
.
.
.
.
.
.
.
.
.
.
.
.
.
.
.
.
.
