
ಹೆಬ್ರಿ,ಏ.27 : ಇತಿಹಾಸ ಪ್ರಸಿದ್ಧ ಶಿವಪುರ ಶ್ರೀಶಂಕರದೇವ ದೇವಸ್ಥಾನದಲ್ಲಿ ನಡೆಯಲಿರುವ ಗಣಪತಿ ಹಾಗೂ ಅನ್ನಪೂರ್ಣೇಶ್ವರೀ ದೇವಿಯ ಪುನ:ಪ್ರತಿಷ್ಠಾ ಅಷ್ಟಬಂಧ, ನೂತನ ಧ್ವಜಸ್ತಂಭ ಪ್ರತಿಷ್ಠೆ, ಶ್ರೀ ಶಂಕರಲಿಂಗೇಶ್ವರ ದೇವರಿಗೆ ಬ್ರಹ್ಮಕಲಶಾಭಿಷೇಕ ಹಾಗೂ ಶ್ರೀಮನ್ಮಹಾರಥೋತ್ಸವದ ಪ್ರಯುಕ್ತ ನಡೆದ ಹೊರೆಕಾಣಿಕೆ ಮೆರವಣಿಗೆಗೆ ಶಾಸಕ ಮತ್ತು ಸಮಿತಿಯ ಗೌರವಾಧ್ಯಕ್ಷರಾದ ವಿ.ಸುನಿಲ್ ಕುಮಾರ್ ಚಾಲನೆ ನೀಡಿದರು.
ಶಿವಪುರದ ಗ್ರಾಮಸ್ಥರು ಹಾಗೂ ವಿವಿಧ ಸಂಘಸಂಸ್ಥೆಗಳು ನೀಡಿದ ಹೊರೆ ಕಾಣಿಕೆಯನ್ನು ಶಿವಪುರ ಪೇಟೆಯಿಂದ ವೈಭವದ ಮೆರವಣಿಗೆಯ ಮೂಲಕ ದೇವಸ್ಥಾನಕ್ಕೆ ತರಲಾಯಿತು. ಮೆರವಣಿಗೆಯಲ್ಲಿ ಚೆಂಡೆ, ವಿವಿಧ ಮಹಿಳಾ ಭಜನಾ ಮಂಡಳಿಯ ತಂಡಗಳು ಹಾಗೂ ವೇಷಭೂಷಣಗಳು ಪಾಲ್ಗೊಂಡಿದ್ದವು.

ಈ ಸಂದರ್ಭದಲ್ಲಿ ಶಿವಪುರ ಶ್ರೀ ಶಂಕರದೇವ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ವಾಸುದೇವಾ ಭಟ್, ಕಾರ್ಯಾಧ್ಯಕ್ಷ ಮುನಿಯಾಲು ಉದಯ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಮೂರ್ಸಾಲು ಗೋಕುಲದಾಸ ನಾಯಕ್, ಪೂನಾ ಉದ್ಯಮಿ ಹರೀಶ ಶೆಟ್ಟಿ ಚಿಟ್ಟೆಬೆಟ್ಟು, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಾರ್ಮಕ್ಕಿ ವಿಶ್ವನಾಥ ನಾಯಕ್, ಮಾಜಿ ಅಧ್ಯಕ್ಷ ಮೂರ್ಸಾಲು ಮೋಹನದಾಸ ನಾಯಕ್, ಸದಸ್ಯರಾದ ಸಂತೋಷ ಕುಮಾರ್ ಶೆಟ್ಟಿ ನಾಯರಕೋಡು, ಕಾಮಗಾರಿ ಸಮಿತಿಯ ಸಂಚಾಲಕ ಶ್ರೀನಿವಾಸ ಹೆಬ್ಬಾರ್ ಶಿವಪುರ, ಆರ್ಥಿಕ ಸಮಿತಿ ಸಂಚಾಲಕ ಸುರೇಶ ಶೆಟ್ಟಿ ಹುಣ್ಸೆಯಡಿ ಶಿವಪುರ, ಚಂದ್ರಶೇಖರ ಶೆಟ್ಟಿ, ಡಾ. ಗುರುಪ್ರಸಾದ್ ಕೊಡಂಚ, ಜಗನ್ನಾಥ ಕುಲಾಲ್ ಶಿವಪುರ, ರಮೇಶ್ ಕುಮಾರ್, ಲಕ್ಷ್ಮೀನಾರಾಯಣ ನಾಯಕ್ ಕನ್ಯಾನ, ಶಿವಪ್ರಸಾದ್ ಅಡಿಗ, ರಮಾನಂದ ಶೆಟ್ಟಿ, ಗಣೇಶ ಹಾಂಡ, ಮಹಾಬಲೇಶ್ವರ ಅಡಿಗ, ಜೀರ್ಣೋದ್ಧಾರ ಸಮಿತಿ, ವ್ಯವಸ್ಥಾಪನಾ ಸಮಿತಿ, ವಿವಿಧ ಉಪಸಮಿತಿಯ ಪ್ರಮುಖರು, ಸದಸ್ಯರು,ಗಣ್ಯರು ಹಾಗೂ ಅರ್ಚಕ ವೃಂದ ಉಪಸ್ಥಿತರಿದ್ದರು.
ಸಮಿತಿಯ ಸಂಚಾಲಕರಾದ ಬೈಕಾಡಿ ಮಂಜುನಾಥ ರಾವ್ ಎಲಿಕೋಡು, ಸಮಿತಿಯ ಸರ್ವ ಸದಸ್ಯರು ಹಾಗೂ ವಿವಿಧ ಸಮಿತಿ ಸದಸ್ಯರ ಸಹಭಾಗಿತ್ವದಲ್ಲಿ ಹೊರೆಕಾಣಿಕೆ ಮೆರವಣಿಗೆ ಯಶಸ್ವಿಯಾಗಿ ನೆರವೇರಿತು.


.
.
.
.
.
.
.
.
.
.
.
.
.
.
.
.
.
.
.
.
