
ಕಾರ್ಕಳ, ಏ. 29: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅವಿವಾಹಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ನಿಟ್ಟೆ ಯ ಸದಾನಂದ ಶೆಟ್ಟಿ(42ವ) ಎಂಬವರು ಅವಿವಾಹಿತರಾಗಿದ್ದು, ಒಂಟಿಯಾಗಿ ವಾಸವಿದ್ದರು.ವಿಪರೀತ ಕುಡಿತದ ಚಟ ಹೊಂದಿದ್ದ ಅವರು ಜೀವನದಲ್ಲಿ ಜಿಗುಪ್ಸೆಗೊಂಡು ಏ. 24 ರಂದು ಸಂಜೆ ಮನೆಯಲ್ಲಿ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮುಕ್ಕ ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಂಗಳವಾರ (ಏ.28) ಮೃತಪಟ್ಟಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


.
.
.
.
.
.
.
.
.
.
.
.
.
.
.
.
.
.
.
.
