
ಕರಾವಳಿ ನ್ಯೂಸ್ ಡಿಜಿಟಲ್ ಡೆಸ್ಕ್
ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವು ಭಾರತ ಸೇರಿದಂತೆ ಜಾಗತಿಕ ಇಂಧನ ಮಾರುಕಟ್ಟೆ ಮೇಲೆ ನೇರ ಪರಿಣಾಮ ಬೀರುತ್ತಿವೆ.ಇರಾನ್, ಇರಾಕ್, ಒಮನ್ ಸೇರಿದಂತೆ ಕೊಲ್ಲಿ ರಾಷ್ಟçಗಳು ವಿಶ್ವದ ಪ್ರಮುಖ ತೈಲ ಉತ್ಪಾದನಾ ಕೇಂದ್ರವಾಗಿರುವುದರಿAದ ಯುದ್ಧದ ಸಂದರ್ಭದಲ್ಲಿ ಜಾಗತಿಕ ಮಾರುಕಟ್ಟೆಗೆ ಇಂಧನ ರಫ್ತು ಸ್ಥಗಿತವಾಗಿ ಜಗತ್ತಿನ ಆರ್ಥಿಕತೆಗೆ ಭಾರೀ ಹೊಡೆತ ನೀಡುತ್ತದೆ. ತೈಲ ಸಾಗಾಟದ ನಿರ್ಬಂಧದ ಪರಿಣಾಮವಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತದೆ. ಭಾರತವು ತನ್ನ ತೈಲ ಅವಶ್ಯಕತೆಗಳ ಬಹುಪಾಲು ಆಮದು ಮಾಡುವ ದೇಶವಾಗಿರುವುದರಿಂದ, ಈ ಬೆಲೆ ಏರಿಕೆಯ ಹೊರೆ ನೇರವಾಗಿ ದೇಶದ ಆರ್ಥಿಕತೆಯ ಮೇಲೆ ಬೀಳುತ್ತದೆ.
ಇತ್ತೀಚಿನ ಮಧ್ಯ ಪ್ರಾಚ್ಯ ಉದ್ವಿಗ್ನತೆಯಿಂದ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಎಲ್‌ಪಿಜಿ ದರಗಳಲ್ಲಿ ಏರಿಕೆ ಕಂಡುಬAದಿದೆ. ಈ ನಡುವೆ ಜನಸಾಮಾನ್ಯರು ಬಳಸುವ ಎಲ್‌ಪಿಜಿ ಗ್ಯಾಸ್ ಬೆಲೆ ಏರಿಕೆಯಿಂದ ಸಾಮಾನ್ಯ ಜನರ ಜೀವನವೇ ದುಸ್ತರವಾಗಿದೆ. ವಿಶೇಷವಾಗಿ ಮಧ್ಯಮ ಹಾಗೂ ಕಡಿಮೆ ಆದಾಯದ ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿವೆ. ಇಂಧನ ದರ ಏರಿಕೆಯು ಸಾರಿಗೆ ವೆಚ್ಚವನ್ನು ಹೆಚ್ಚಿಸುವುದರ ಮೂಲಕ ಎಲ್ಲಾ ವಸ್ತುಗಳ ಬೆಲೆಯ ಮೇಲೂ ನೇರ ಪರಿಣಾಮ ಬೀರುತ್ತದೆ. ಈ ಹಿನ್ನೆಲೆಯಲ್ಲಿ, ಪರ್ಯಾಯ ಇಂಧನಗಳ ಬಳಕೆಯ ಅಗತ್ಯತೆ ಅನಿವಾರ್ಯವಾಗಿದೆ. ಸೌರಶಕ್ತಿ, ಗಾಳಿ ಶಕ್ತಿ, ಜೈವಿಕ ಇಂಧನ ಹಾಗೂ ಬ್ಯಾಟರಿ ಚಾಲಿತ ವಾಹನಗಳು ಭಾರತದಲ್ಲಿಮ ಇಂಧನದ ಮೇಲಿನ ಅವಲಂಬನೆ ಗಣನೀಯ ಮಟ್ಟದಲ್ಲಿ ಕಡಿಮೆ ಮಾಡಬಹುದಾಗಿದೆ.
ಈಗಾಗಲೇ ಭಾರತ ಸರ್ಕಾರ ಈಗಾಗಲೇ ಸೌರಶಕ್ತಿ ಯೋಜನೆಗಳು, ಎಲೆಕ್ಟ್ರಿಕ್ ವಾಹನಗಳಿಗೆ ಪ್ರೋತ್ಸಾಹ ಹಾಗೂ ಬಯೋ ಗ್ಯಾಸ್ ಘಟಕಗಳ ಸ್ಥಾಪನೆಗೆ ಉತ್ತೇಜನ ನೀಡುತ್ತಿದೆ. ಆದರೆ, ಈ ಪ್ರಯತ್ನಗಳನ್ನು ನಿರೀಕ್ಷಿತ ಮಟ್ಟದಲ್ಲಿ ಪ್ರಗತಿಯಾಗಿಲ್ಲ. ಮಧ್ಯಪ್ರಾಚ್ಯ ಬಿಕ್ಕಟ್ಟಿನ ಸಂದರ್ಭದಲ್ಲಿ ಪರ್ಯಾಯ ಇಂಧನಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಈ ಯೋಜನೆಗಳನ್ನು ಇನ್ನಷ್ಟು ವಿಸ್ತರಿಸುವ ಅಗತ್ಯವಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹಸಿ ತ್ಯಾಜ್ಯದಿಂದ ಬಯೋ ಗ್ಯಾಸ್ ಉತ್ಪಾದನೆ ಮಾಡುವ ಮೂಲಕ ಎಲ್‌ಪಿಜಿ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಬಹುದು. ನಗರ ಪ್ರದೇಶಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವುದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬಳಕೆ ಕಡಿಮೆಯಾಗುತ್ತದೆ.
ಸೌರಶಕ್ತಿ ಪ್ಯಾನಲ್‌ಗಳ ಬಳಕೆಯಿಂದ ಮನೆಗಳ ವಿದ್ಯುತ್ ಅವಶ್ಯಕತೆಯನ್ನು ಸ್ವಯಂ ಪೂರೈಸುವ ಸಾಧ್ಯತೆಯೂ ಇದೆ. ಇದರೊಂದಿಗೆ, ಸರ್ಕಾರವು ಜನಜಾಗೃತಿ ಕಾರ್ಯಕ್ರಮಗಳನ್ನು ನಡೆಸಿ ಪರ್ಯಾಯ ಇಂಧನಗಳ ಪ್ರಯೋಜನಗಳನ್ನು ಜನರಿಗೆ ತಿಳಿಸುವುದು ಅತ್ಯಂತ ಮುಖ್ಯ. ಖಾಸಗಿ ಕ್ಷೇತ್ರದ ಸಹಭಾಗಿತ್ವದ ಮೂಲಕ ತಂತ್ರಜ್ಞಾನ ಅಭಿವೃದ್ಧಿ ಮತ್ತು ಹೂಡಿಕೆಗಳನ್ನು ಹೆಚ್ಚಿಸಬಹುದು.
ಮಧ್ಯ ಪ್ರಾಚ್ಯ ಯುದ್ಧದಂತಹ ಜಾಗತಿಕ ಘಟನೆಗಳು ಮುಂದೆ ಭಾರತಕ್ಕೆ ಎಚ್ಚರಿಕೆಯ ಗಂಟೆಯAತಿವೆ. ವಿಶ್ವದಲ್ಲಿ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಎರಡನೇ ದೊಡ್ಡ ದೇಶವಾಗಿರು ವ ಭಾರತದಲ್ಲಿ ಇಂಧನದ ಬೇಡಿಕೆಯೂ ದಿನೇದಿನೇ ಹೆಚ್ಚುತ್ತಿದೆ. ಮುಂದೊAದು ದಿನ ಮೂರನೇ ಮಹಾಯುದ್ಧ ಆರಂಭವಾದರೆ ಭಾರತದಲ್ಲಿ ಇಂಧನ ಬಿಕ್ಕಟ್ಟು ಊಹಿಸಲೂ ಸಾಧ್ಯವಿಲ್ಲದ ಮಟ್ಟಕ್ಕೆ ತಲುಪಬಹುದು. ಈ ನಿಟ್ಟಿನಲ್ಲಿ ಇಂಧನ ಸ್ವಾವಲಂಬನೆ ಸಾಧಿಸಲು ಮತ್ತು ಬೆಲೆ ಏರಿಕೆಯ ಪರಿಣಾಮವನ್ನು ಕಡಿಮೆ ಮಾಡಲು, ಪರ್ಯಾಯ ಇಂಧನಗಳ ಪರಿಣಾಮಕಾರಿ ಬಳಕೆ ಕುರಿತು ಭಾರತ ಸರ್ಕಾರ ದಿಟ್ಟ ಹೆಜ್ಜೆ ಇಡಬೇಕಿದೆ.


.
.
.
.
.
.
.
.
.
.
.
.
.
.
.
.
.
.
.
.
